ಮುಂಬೈನ ಮೊಸರು ಕುಡಿಕೆ ಉತ್ಸವದಲ್ಲಿ ದುರಂತ; ಇಬ್ಬರು ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಭಾರೀ ಮಳೆಯ ನಡುವೆಯೂ ಮುಂಬೈನಲ್ಲಿ ಗೋಕುಲಾಷ್ಟಮಿ ಸಂಭ್ರಮದ ಭಾಗವಾಗಿ ನಡೆದ ಸಾಂಪ್ರದಾಯಿಕ ಮೊಸರು ಕುಡಿಕೆ ಉತ್ಸವವನ್ನು ವಿವಿಧೆಡೆ ಆಚರಿಸಲಾಯಿತು. ಆದರೆ, ಈ ಉತ್ಸವದಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಇಬ್ಬರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

39 ವರ್ಷದ ಯುವಕ ಮತ್ತು 14 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಮಾನವ ಪಿರಮಿಡ್ ರಚನೆಯ ಸಂದರ್ಭದಲ್ಲಿ ಈ ದುರ್ಘಟನೆಗಳು ನಡೆದಿದೆ. ಒಂದು ಘಟನೆಯಲ್ಲಿ, ಟೆಂಪೊದಲ್ಲಿ ಕುಳಿತಿದ್ದ ಬಾಲಕ ಕುಸಿದು ಬಿದ್ದು ಜೀವ ಕಳೆದುಕೊಂಡಿದ್ದಾನೆ. ಮತ್ತೊಂದು ಘಟನೆಯಲ್ಲಿ, ಯುವಕನೊಬ್ಬ ಸ್ನೇಹಿತನ ಮನೆಯ ಬಾಲ್ಕನಿಯಿಂದ ಹಗ್ಗದ ಮೂಲಕ ಕಟ್ಟಿದ್ದ ಮೊಸರು ಕುಡಿಕೆಯನ್ನು ಒಡೆಯಲು ಯತ್ನಿಸುವಾಗ ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಗರ ಪಾಲಿಕೆ ಮತ್ತು ಸರ್ಕಾರಿ ಆಸ್ಪತ್ರೆಗಳಿಂದ ರಾತ್ರಿ 9 ಗಂಟೆವರೆಗೆ ಲಭ್ಯವಾದ ಮಾಹಿತಿಯ ಪ್ರಕಾರ, ಥಾಣೆಯಲ್ಲಿ 17, ನವಿ ಮುಂಬೈನಲ್ಲಿ 6 ಮತ್ತು ಕಲ್ಯಾಣ್-ಉಲ್ಲಾಸ್‌ನಗರದಲ್ಲಿ 5 ಜನ ಗಾಯಗೊಂಡಿದ್ದಾರೆ. ಒಟ್ಟು ಗಾಯಾಳುಗಳ ಸಂಖ್ಯೆ 123ಕ್ಕೆ ಏರಿದೆ. ಗಾಯಗೊಂಡವರಲ್ಲಿ 9 ವರ್ಷದ ಬಾಲಕ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಈ ವರ್ಷದ ಉತ್ಸವದ ವಿಶೇಷತೆಯೆಂದರೆ, ಜೋಗೇಶ್ವರಿಯ ಕೊಂಕಣ ನಗರ ಗೋವಿಂದ ತಂಡವು ಥಾಣೆಯಲ್ಲಿ ಸಚಿವ ಪ್ರತಾಪ್ ಸರನಾಯಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 10 ಸ್ತರಗಳ ಮಾನವ ಪಿರಮಿಡ್ ರಚಿಸಿ ಇತಿಹಾಸ ನಿರ್ಮಿಸಿತು. ಇದು ಮೊದಲ ಬಾರಿಗೆ ಒಂದೇ ಕಾರ್ಯಕ್ರಮದಲ್ಲಿ ಮೂರು ಬಾರಿ 10 ಸ್ತರಗಳ ಪಿರಮಿಡ್ ರಚನೆಯಾದ ಸಾಧನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...