ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

Date:

ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್ ಮತ್ತು ಕಮಲೇಂದ್ರ ಪ್ರಸಾದ್ ಅವರು ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಯನ್ನು ನಡೆಸುವಂತೆ ಮತ್ತು ಪ್ರಸ್ತುತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2017ರಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಥಿತಿಗತಿ ಮಾತ್ರವಲ್ಲದೆ, ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಪೀಠವು ಇಬ್ಬರು ಮಾಜಿ ಡಿಜಿಪಿಗಳಿಗೆ ಸೂಚಿಸಿದೆ.

ಇತ್ತೀಚಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. 2017ರ ಆ.20ರಂದು ಈ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ. ಪ್ರಕರಣದ ಏಳು ಆರೋಪಿಗಳ ಪೈಕಿ 6 ಮಂದಿಗೆ ಹರಿಯಾಣ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...