ಒಮಾನ್‌ನಲ್ಲಿ ಇರಾನ್ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾವು, 10 ಮಂದಿಗೆ ಗಾಯ

Date:

ಒಮಾನ್‌ನ ಸೊಹಾರ್ ನಗರದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು (ಮಾ.13) ತಿಳಿಸಿದೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಸೀಮ್ ಆರ್. ಮಹಾಜನ್, ‘ದಾಳಿಯಲ್ಲಿ ಒಟ್ಟು 11 ಜನರು ಗಾಯಗೊಂಡಿದ್ದು, ಅವರಲ್ಲಿ 10 ಮಂದಿ ಭಾರತೀಯರು’ ಎಂದು ಮಾಹಿತಿ ನೀಡಿದರು. ಗಾಯಗೊಂಡವರಲ್ಲಿ ಐವರನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಉಳಿದ ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.

“ಇಂದು ಮಸ್ಕತ್‌ನ ಸೊಹಾರ್ ನಗರದಲ್ಲಿ ನಡೆದ ಘಟನೆಯೊಂದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಅಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ನಾವು ತೀವ್ರ ಸಂತಾಪ ಸೂಚಿಸುತ್ತೇವೆ. ಗಾಯಗೊಂಡ 11 ಜನರಲ್ಲಿ 10 ಮಂದಿ ಭಾರತೀಯರಾಗಿದ್ದಾರೆ. ಅವರಲ್ಲಿ ಐವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದು, ಉಳಿದ ಐವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ,” ಎಂದು ಅಸೀಮ್ ಆರ್. ಮಹಾಜನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನೆತನ್ಯಾಹು ಬದುಕಿದ್ದಾರಾ? ಇರಾನ್ ರಣಕಹಳೆಗೆ ತತ್ತರಿಸಿದ ಇಸ್ರೇಲ್

“ನಮ್ಮ ರಾಯಭಾರ ಕಚೇರಿಯು ಸಂಬಂಧಪಟ್ಟ ಕಂಪನಿ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲಾ ನೆರವು ಒದಗಿಸುತ್ತಿದೆ,” ಎಂದು ಮಹಾಜನ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಭಾರತೀಯ ಅಧಿಕಾರಿಗಳು ಒಮಾನ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸಂತ್ರಸ್ತ ಭಾರತೀಯರಿಗೆ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇದೇ ವೇಳೆ, ಒಮಾನ್‌ನ ಸರ್ಕಾರಿ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ‘ಅಲ್ ಜಜೀರಾ’, ಡ್ರೋನ್ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. “ಶುಕ್ರವಾರ ಬೆಳಿಗ್ಗೆ ಡ್ರೋನ್‌ಗಳಲ್ಲಿ ಒಂದು ಅಲ್-ಅವಾಹಿ ಕೈಗಾರಿಕಾ ಪ್ರದೇಶಕ್ಕೆ ಅಪ್ಪಳಿಸಿದ್ದು, ಇಬ್ಬರು ವಿದೇಶಿಯರು ಮೃತಪಟ್ಟು, ಇತರರು ಗಾಯಗೊಂಡಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...