ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿಯಿಂದ ಇಬ್ಬರು ಸಾವು

Date:

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ.

ಮೃತರಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಸೇರಿದ್ದಾನೆ. ಕೈಸರ್‌ಜಂಗ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜ್‌ ಭೂಷಣ್ ಸಿಂಗ್‌ ಪುತ್ರ ಕರಣ್‌ ಭೂಷಣ್‌ ಸಿಂಗ್‌ ಈ ಬಾರಿ ಸ್ಪರ್ಧಿಸಿದ್ದಾನೆ.

ವಿಡಿಯೋದಲ್ಲಿರುವ ಪ್ರಕಾರ ಅಪಘಾತದ ಸ್ಥಳದಲ್ಲಿ ಪೊಲೀಸ್ ಬೆಂಗಾವಲು ವಾಹನ ಎಂದು ಕಾರಿನ ಮುಂಭಾಗದ ಗಾಜಿನಲ್ಲಿ ತೋರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

ಎಫ್‌ಐಆರ್‌ ವರದಿಯಂತೆ ದೂರುದಾರ ಚಂದಾ ಬೇಗಂ ಅವರ ಹೇಳಿಕೆಯಂತೆ ಇಂದು ಬೆಳಿಗ್ಗೆ 9 ಗಂಟೆಗೆ 17 ವರ್ಷದ ರೆಹಾನ್‌ ಹಾಗೂ 24 ವರ್ಷದ ಶಾಝಾದೆ ಅವರು ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಎದುರುನಿಂದ ವೇಗವಾಗಿ ಬಂದ ಎಸ್‌ಯುವಿ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಕಾರನ್ನು ವಶಪಡಿಸಿಕೊಂಡಿರುವ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಬ್ರಿಜ್‌ಭೂಷಣ್‌ ಅವರು ಹಿಂದಿನ ಕಾರಿನಲ್ಲಿ ಚಲಿಸುತ್ತಿದ್ದರೆಂಬುದಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸ್ಥಳದಲ್ಲಿ ಹಲವು ಜನರು ಸೇರಿದ್ದು, ಮೃತರ ಕುಟುಂಬ ಸದಸ್ಯರು ನ್ಯಾಯ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ದೆಹಲಿ ಕೋರ್ಟ್ ಈತನ ವಿರುದ್ಧ ಪ್ರಕರವನ್ನು ದಾಖಲಿಸಿದೆ. ಬಿಜೆಪಿ ಈ ಬಾರಿ ಬ್ರಿಜ್‌ಗೆ ಲೋಕಸಭಾ ಟಿಕೆಟ್ ನಿರಾಕರಿಸಿ ಆತನ ಪುತ್ರನಿಗೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...