ಜಮ್ಮು ಕಾಶ್ಮೀರ | ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ; ಇಬ್ಬರು ಯೋಧರು ಹುತಾತ್ಮ

Date:

ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದ್ದು, ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುತ್ತೇವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದೆ. ಶನಿವಾರ ಒಂಬತ್ತನೇ ದಿನಕ್ಕೆ ಕಾರ್ಯಾಚರಣೆ ಕಾಲಿಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಕಾಡಿನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ಆಗಸ್ಟ್ 1ರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ಬಹಿರಂಗವಾಗಿಲ್ಲ.

ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಚಿನಾರ್ ಕಾರ್ಪ್ಸ್, “ದೇಶಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧೈರ್ಯಶಾಲಿಗಳಾದ ಎಲ್/ಎನ್ ಕೆ ಪ್ರೀತ್‌ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಅವರ ತ್ಯಾಗವನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...