2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅ. 7ರವರೆಗೆ ಅವಧಿ ವಿಸ್ತರಿಸಿದ ಆರ್‌ಬಿಐ

Date:

  • ಅಕ್ಟೋಬರ್ 7ರವರೆಗೂ 2000 ರೂ. ನೋಟು ವಿನಿಮಯಕ್ಕೆ ಅವಕಾಶ
  • ಅ.8ರ ನಂತರ 2000 ರೂ. ನೋಟುಗಳ ಸ್ವೀಕಾರ ಬ್ಯಾಂಕ್‌ಗಳಲ್ಲಿ ಸ್ಥಗಿತ

2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ನೀಡಿರುವ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಕ್ಟೋಬರ್ 7ರವರೆಗೂ ವಿಸ್ತರಿಸಿದೆ.

ಈ ಮುಂಚೆ ಸೆಪ್ಟೆಂಬರ್ 30 (ಶನಿವಾರ) ಕೊನೆಯ ದಿನ ಎಂದು ಆರ್‌ಬಿಐ ಹೇಳಿತ್ತು. ಈಗ ಒಂದು ವಾರದ ಮಟ್ಟಿಗೆ ನೋಟುಗಳ ವಿನಿಮಯಕ್ಕೆ ಅವಕಾಶ ಮಾಡಿಕೊಟ್ಟಿದೆ.

ಅಕ್ಟೋಬರ್ 8ರ ನಂತರ 2 ಸಾವಿರ ರೂ ನೋಟುಗಳ ಸ್ವೀಕಾರವನ್ನು ಬ್ಯಾಂಕುಗಳು ನಿಲ್ಲಿಸಲಿವೆ. ಆದರೆ, ಜನರು ಆರ್‌ಬಿಐನ 19 ಶಾಖೆಗಳಲ್ಲಿ 2 ಸಾವಿರ ರೂ ನೋಟುಗಳನ್ನು ಆನಂತರವೂ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ ಎಂದು ಆರ್‌ಬಿಐ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಭಾರತೀಯ ಅಂಚೆಯಿಂದ ಆರ್‌ಬಿಐನ ‘ಇಷ್ಯೂ ಆಫೀಸರ್‍ಸ್’ಗಳಿಗೆ ಅಂಚೆ ಮುಖಾಂತರವೂ 2000 ನೋಟುಗಳನ್ನು ಕಳುಹಿಸಬಹುದಾಗಿದೆ. ಈ ನೋಟುಗಳು ವಿನಿಮಯದ ಕೊನೆಯ ದಿನ ಮುಗಿದ ಬಳಿಕವೂ ಮಾನ್ಯವಾಗಿರುತ್ತವೆ ಎಂದು ಆರ್‌ಬಿಐ ಹೇಳಿದೆ.

ಮೇ 19ರಂದು ಹೊರಡಿಸಿದ ಸುತ್ತೋಲೆ ಪ್ರಕಾರ ಆರ್‌ಬಿಐ ಚಲಾವಣೆಯಲ್ಲಿ ಇದ್ದ 3.56 ಲಕ್ಷ ಕೋಟಿ ರೂ. ಮೊತ್ತದಲ್ಲಿ 3.42 ಲಕ್ಷ ಕೋಟಿ ರೂ. ಮೊತ್ತದ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಮರಳಿ ಪಡೆದಿದೆ. ಇದರಿಂದ ಸೆಪ್ಟೆಂಬರ್ 29ರವರೆಗೂ ಕೇವಲ 0.14 ಲಕ್ಷ ಕೋಟಿ ರೂ. ಮೊತ್ತದ 2 ಸಾವಿರ ರೂ. ಚಲಾವಣೆಯಲ್ಲಿ ಬಾಕಿ ಉಳಿದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...