ಮಧ್ಯಪ್ರದೇಶ | ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ; ನಾಲ್ವರ ಬಂಧನ

Date:

ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಗ್ವಾಲಿಯರ್‌ನ ದಾಬ್ರಾ ಪಟ್ಟಣದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಗೆ ಥಳಿಸಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ವಿದ್ಯುತ್ ಕಂಬವೊಂದಕ್ಕೆ ಮಹಿಳೆಯೊಬ್ಬರನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ. ಇನ್ನೋರ್ವ ಮಹಿಳೆಗೆ ಗಾಯಗಳಾಗಿದ್ದು ಸಮೀಪದಲ್ಲೇ ಶೋಚನೀಯ ಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

ವಿಜಯ್ ಅಗರ್ವಾಲ್ ಮತ್ತು ಆತನ ಸಹಚರರು ತಮ್ಮನ್ನು ಕಂಬಕ್ಕೆ ಕಟ್ಟಿ ಥಳಿಸಿರುವುದಾಗಿ ಮಹಿಳೆಯರು ಆರೋಪಿಸಿದ್ದು, ಪೊಲೀಸರು ಒಟ್ಟು 14 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ನಾಲ್ವರನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಹಿಳೆಯರಿಗೆ ಸಾರ್ವಜನಿಕವಾಗಿ ಥಳಿಸಿರುವ ಹಲವು ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೂ ಬಲಿಯಾಗಿರುವುದು ಮಹಿಳೆಯರೇ. ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಲಾಗಿತ್ತು. ಮಹಿಳಾ ದೌರ್ಜನ್ಯ ವಿಚಾರದಲ್ಲಿ ನಮ್ಮ ರಾಜ್ಯವೇನು ಹೊರತಾಗಿಲ್ಲ. ಯುವತಿ ಮತ್ತು ಯುವಕರಿಬ್ಬರು ಪ್ರೀತಿಸಿ ಮನೆ ತೊರೆದು ಹೋದರೆಂಬ ಕಾರಣಕ್ಕೆ ಯುವತಿಯ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಮ್ಮ ರಾಜ್ಯದ ಹಾವೇರಿಯಲ್ಲಿ ಕಳೆದ ವರ್ಷ ನಡೆದಿದೆ. ಇಂತಹ ಅದೆಷ್ಟೋ ಘಟನೆಗಳು ಪ್ರತಿದಿನ ವರದಿಯಾಗುತ್ತಿದ್ದರೆ, ಕೆಲವು ಘಟನೆಗಳು ಬೆಳಕಿಗೆ ಬರುತ್ತಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...