16 ವರ್ಷದ ಬಾಲಕಿಯ ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ ಎಸಗಿದ ದುರುಳ

Date:

16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ. 20 ವರ್ಷದ ಆರೋಪಿ ಥಾಣೆಯ ಬಾಲಕಿಯನ್ನು ಅಪಹರಿಸಿ ಅಕೋಲಾಕ್ಕೆ ಕರೆದೊಯ್ಯುತ್ತಿದ್ದ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 30ರಂದು ಬಾಲಕಿಯನ್ನು ಆರೋಪಿ ರೈಲಿನಲ್ಲಿ ಅಕೋಲಾಕ್ಕೆ ಕರೆದೊಯ್ದಿದ್ದಾನೆ. ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಕಲ್ಯಾಣ್‌ನ ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್‌ಪಿ) ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಪಂಢರಿ ಕಾಂಡೆ ಸೋಮವಾರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯನ್ನು ತನ್ನ ಮನೆಗೆಯೇ ಈ ಆರೋಪಿ ಕರೆದೊಯ್ದಿದ್ದಾನೆ. ಈ ವೇಳೆ ಯುವಕನ ಪೋಷಕರು ಮನೆಯೊಳಗೆ ಬರಲು ಬಿಡದ ಕಾರಣ ಆತ ಆಕೆಯನ್ನು ಅಕೋಲಾ ರೈಲು ನಿಲ್ದಾಣದಲ್ಲಿ ಬಿಟ್ಟು ಮನೆಗೆ ಮರಳಿದ್ದಾನೆ ಎಂದು ಹೇಳಲಾಗಿದೆ.

ಅಕೋಲಾ ಜಿಆರ್‌ಪಿ ಸಿಬ್ಬಂದಿ ಬಾಲಕಿಯನ್ನು ನಿಲ್ದಾಣದಲ್ಲಿ ನೋಡಿ ವಿಚಾರಿಸಿದಾಗ ಆಕೆ ಅಪರಾಧದ ಬಗ್ಗೆ ತಿಳಿಸಿದ್ದಾಳೆ. ಅಕೋಲಾದ ಜಿಆರ್‌ಪಿ ‘ಶೂನ್ಯ’ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ವರ್ಗಾಯಿಸಿದ್ದಾರೆ. ಸದ್ಯ ಆರೋಪಿಯ ವಿರುದ್ದ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 64(ಅತ್ಯಾಚಾರ), 74(ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಕೃತ್ಯ), 137 (ಅಪಹರಣ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯ ಶೋಧ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...