ವಿಷಪೂರಿತ ಆಹಾರ ಸೇವಿಸಿ ಕನಿಷ್ಠ 200 ಗಿಳಿಗಳ ಸಾವು: ದೇಶದಲ್ಲಿ ಪಕ್ಷಿ ಪ್ರಭೇದಗಳ ಸಂಖ್ಯೆಯಲ್ಲಿ ಕುಸಿತ

Date:

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಷಪೂರಿತ ನೀರು ಸೇವಿಸಿ 10 ಮಂದಿ ಮೃತಪಟ್ಟಿದ್ದು 150ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಈ ನಡುವೆಯೇ ಅದೇ ರಾಜ್ಯದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ವಿಷಪೂರಿತ ಆಹಾರ ಸೇವಿಸಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿದೆ. ದೇಶದಲ್ಲಿ ಸದ್ಯ ಶೇಕಡ 60ರಷ್ಟು ಪಕ್ಷಿ ಪ್ರಬೇಧಗಳು ಕುಸಿತ ಕಾಣುತ್ತಿರುವ ನಡುವೆ ಈ ಸುದ್ದಿಯಾಗಿದೆ.

ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆಯ ಬಳಿ ಕಳೆದ ನಾಲ್ಕು ದಿನಗಳಲ್ಲಿ ಕನಿಷ್ಠ 200 ಗಿಳಿಗಳ ಮೃತದೇಹಗಳು ಪತ್ತೆಯಾಗಿದೆ. ಆರಂಭದಲ್ಲಿ ಪಕ್ಷಿ ಜ್ವರ ಈ ಸಾವಿಗೆ ಕಾರಣ ಎನ್ನಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಿಂದ ವಿಷಪೂರಿತ ಆಹಾರ ಸೇವನೆ ಮಾಡಿರುವುದರಿಂದ ಗಿಳಿಗಳು ಸಾವನ್ನಪ್ಪಿರುವುದು ಖಚಿತವಾಗಿದೆ.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಸಮುದ್ರ ಮೀನುಗಾರಿಕೆ ಪ್ರಾರಂಭ: 2 ತಿಂಗಳ ಬಳಿಕ ಕಡಲಿಗಿಳಿದ ಬೋಟುಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗಿಳಿಗಳನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಸಿದಾಗ ಕೆಲವು ಗಿಳಿಗಳು ಜೀವಂತವಾಗಿದ್ದವು, ಆದರೆ ಆಹಾರದ ವಿಷತ್ವವು ಅತಿ ತೀವ್ರವಾಗಿದ್ದ ಕಾರಣ ಕೆಲವೇ ಸಮಯದಲ್ಲಿ ಸಾವನ್ನಪ್ಪಿದೆ ಎಂದು ಸ್ಥಳೀಯ ಮಾಧ್ಯಮಗಳಿಗೆ ಜಿಲ್ಲಾ ವನ್ಯಜೀವಿ ವಾರ್ಡನ್ ಟೋನಿ ಶರ್ಮಾ ಹೇಳಿದ್ದಾರೆ.

ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಜಲಚರ ಸೇತುವೆಯ ಬಳಿ ಆಹಾರವನ್ನು ನೀಡುವುದನ್ನು ನಿಷೇಧಿಸಿದ್ದು, ಸ್ಥಳದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಜತೆಗೆ ಹೆಚ್ಚಿನ ಪರೀಕ್ಷೆಗಾಗಿ ಪಕ್ಷಿಗಳ ಮಾದರಿಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ.

ಆರಂಭದಲ್ಲಿ ಸ್ಥಳೀಯ ನಿವಾಸಿಗಳು ಸ್ಥಳವನ್ನು ಪರಿಶೀಲಿಸಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದಾದ ಬಳಿಕ ಪಶುವೈದ್ಯಕೀಯ ಮತ್ತು ಅರಣ್ಯ ಇಲಾಖೆಗಳು, ವನ್ಯಜೀವಿ ವಿಭಾಗದ ತಂಡಗಳು ಸ್ಥಳಕ್ಕೆ ಆಗಮಿಸಿ ಪ್ರದೇಶವನ್ನು ಪರಿಶೀಲಿಸಿದೆ. ಇನ್ನು ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯ ಡಾ. ಮನಿಷಾ ಚೌಹಾಣ್, ಗಿಳಿಗಳು ವಿಷಪೂರಿತ ಆಹಾರ ಸೇವಿಸಿದೆ. ಪಕ್ಷಿ ಜ್ವರದ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿಸಿದೆ.

“ಜನರು ಸಾಮಾನ್ಯವಾಗಿ ತಿಳಿಯದೆ ಪಕ್ಷಿಗಳಿಗೆ ಆಹಾರವನ್ನು ನೀಡುತ್ತಾರೆ. ಆದರೆ ಎಲ್ಲ ಆಹಾರಗಳು ಪಕ್ಷಿಗಳ ಜೀರ್ಣಾಂಗ ವ್ಯವಸ್ಥೆಗೆ ಸರಿಹೊಂದದು. ಸತ್ತ ಪಕ್ಷಿಗಳ ಹೊಟ್ಟೆಯಲ್ಲಿ ಅಕ್ಕಿ ಮತ್ತು ಸಣ್ಣ ಬೆಣಚುಕಲ್ಲುಗಳು ಕಂಡುಬಂದಿದೆ” ಎಂದು ಪಶುವೈದ್ಯಕೀಯ ವಿಸ್ತರಣಾ ಅಧಿಕಾರಿ ಡಾ. ಸುರೇಶ್ ಬಾಘೇಲ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರು ಅಸ್ವಸ್ಥ

ದೇಶದಲ್ಲಿ ಒಟ್ಟಾಗಿ ಎಲ್ಲ ಪ್ರಭೇದಗಳ ಗಿಳಿಯ ಸಂಖ್ಯೆಯಲ್ಲಿ ಕುಸಿತ ಕಾಣದಿದ್ದರೂ, ಅಲೆಕ್ಸಾಂಡ್ರೈನ್ ಪಾರಕೀಟ್ (Alexandrine Parakeet) ಪ್ರಭೇದ ಕಡಿಮೆಯಾಗುತ್ತಿದೆ. ಅಕ್ರಮ ಮಾರಾಟ, ಆವಾಸಸ್ಥಾನ ನಾಶ ಮತ್ತು ಬೇಟೆಯಿಂದಾಗಿ ಈ ಪ್ರಭೇದದ ಕಡಿಮೆಯಾಗುತ್ತಿದೆ. ಆದರೆ ರೋಸ್-ರಿಂಗ್ಡ್ ಪಾರಕೀಟ್ (Rose-ringed Parakeet) ಮತ್ತು ಇತರೆ ಪ್ರಭೇದಗಳ ಸಂಖ್ಯೆ ಸ್ಥಿರವಾಗಿದೆ.

ಆದರೆ State of India’s Birds 2023 ವರದಿ ಪ್ರಕಾರ ದೇಶದಲ್ಲಿ ಒಟ್ಟಾರೆಯಾಗಿ 30ಕ್ಕೂ ಅಧಿಕ ವರ್ಷಗಳ ಅವಧಿಯಲ್ಲಿ ಸುಮಾರು 338-348 ಪಕ್ಷಿ ಪ್ರಭೇದಗಳಲ್ಲಿ ಸುಮಾರು ಶೇ.60ರಷ್ಟು ಅಂದರೆ 204 ಪ್ರಭೇದಗಳಲ್ಲಿ ಕುಸಿತ ಕಂಡುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...