ದೆಹಲಿ | 20 ಸಾವಿರ ಕಾರು ಮಾಲೀಕರ ಪ್ರತಿ ಕಾರಿನ ಮೇಲೆ 100ಕ್ಕೂ ಹೆಚ್ಚು ಉಲ್ಲಂಘನೆ ಪ್ರಕರಣಗಳು

Date:

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 20 ಸಾವಿರಕ್ಕೂ ಹೆಚ್ಚು ಕಾರು ಮಾಲೀಕರ ಪ್ರತಿ ಕಾರಿನ ಮೇಲೆ ತಲಾ 100 ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಆದರೆ ಅವುಗಳ ಮಾಲೀಕರು ಇನ್ನೂ ಕೂಡ ದಂಡವನ್ನು ಪಾವತಿಸಿಲ್ಲ ಎಂದು ದೆಹಲಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಸಂಚಾರ ಪೊಲೀಸರ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಇಂತಹ 20,684 ವಾಹನಗಳಿದ್ದು, ಇವುಗಳ ವಿರುದ್ಧ 100 ಅಥವಾ ಹೆಚ್ಚಿನ ಸಂಚಾರ ನಿಯಮ ಉಲ್ಲಂಘಿಸಿರುವ ನೋಟಿಸ್‌ ನೀಡಲಾಗಿದೆ. ಅಲ್ಲದೆ, ದೆಹಲಿಯಲ್ಲಿ 1.65 ಲಕ್ಷಕ್ಕೂ ಹೆಚ್ಚು ವಾಹನಗಳು 20 ಅಥವಾ ಅದಕ್ಕಿಂತ ಹೆಚ್ಚು ಉಲ್ಲಂಘನೆಯ ಪ್ರಕರಣಗಳನ್ನು ಹೊಂದಿವೆ.

ಆತಂಕಕಾರಿ ವಿಷಯವೇನೆಂದರೆ, ಈ ಪ್ರಕರಣಗಳು ಸಣ್ಣ ಸಂಚಾರಿ ಉಲ್ಲಂಘನೆಗಳನ್ನು ಒಳಗೊಂಡಿರದೆ, ನಿರ್ಲಕ್ಷ್ಯದ ಚಾಲನೆ, ಅತಿವೇಗದ ಚಾಲನೆ, ಕೆಂಪು ದೀಪ ಮತ್ತು ಅಸಮರ್ಪಕ ಲೇನ್ ಬದಲಾವಣೆಯಂತಹ ಪ್ರಮುಖವಾದ ಪ್ರಕರಣಗಳನ್ನು ಹೊಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಈ ವಾಹನಗಳ ಮಾಲೀಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವಂತೆ ಕೋರಿ ಸಂಚಾರ ಪೊಲೀಸರು ಇದೀಗ ದೆಹಲಿ ಸರ್ಕಾರ ಮತ್ತು ಇತರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇವುಗಳಲ್ಲಿ ಹಲವು ವಾಹನಗಳು ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರ ಪೊಲೀಸರ ಪ್ರಕಾರ, ಈ ವರ್ಷ ಜೂನ್ 30ರ ಹೊತ್ತಿಗೆ ದೆಹಲಿಯಲ್ಲಿ 58 ಲಕ್ಷ ವಾಹನಗಳು ಒಟ್ಟು 2.6 ಕೋಟಿ ಉಲ್ಲಂಘನೆಯ ಪ್ರಕರಣಗಳನ್ನು ಎದುರಿಸುತ್ತಿವೆ. ಅವುಗಳಲ್ಲಿ 2.2 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ಸುಮಾರು 1.65 ಲಕ್ಷ ವಾಹನಗಳು 67 ಲಕ್ಷಕ್ಕೂ ಹೆಚ್ಚು ಉಲ್ಲಂಘನೆಯ ಪ್ರಕರಣಗಳನ್ನು ಹೊಂದಿವೆ.

ಈ ಪ್ರಕರಣಗಳು ಸಂಚಾರ ಸಿಬ್ಬಂದಿಯಿಂದ ಸ್ಥಳ ಪರಿಶೀಲನೆಯ ಸಮಯದಲ್ಲಿ ನೀಡಲಾದ ಮತ್ತು ಸಂಚಾರ ಕ್ಯಾಮೆರಾಗಳಿಂದ ಸೆರೆಹಿಡಿಯಲ್ಪಟ್ಟವುಗಳನ್ನು ಒಳಗೊಂಡಿವೆ.

ಕಳೆದ ವರ್ಷ ರಾಷ್ಟ್ರ ರಾಜಧಾನಿಯಲ್ಲಿ 14 ಲಕ್ಷ ಸಂಚಾರ ನಿಯಮ ಉಲ್ಲಂಘನೆ ದಾಖಲಾಗಿತ್ತು. ಇದು 2021 ರಲ್ಲಿ ವರದಿಯಾದ 18 ಲಕ್ಷ ಉಲ್ಲಂಘನೆಗಿಂತ ಕಡಿಮೆಯಾಗಿದೆ. ಈ ವರ್ಷ ದೆಹಲಿಯಲ್ಲಿ ಜೂನ್ 30 ರವರೆಗೆ 6.3 ಲಕ್ಷ ಸಂಚಾರ ಉಲ್ಲಂಘನೆಗಳು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...