2021ರಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಸಾವು ಪ್ರಕರಣ; ಹೊಸ ತನಿಖೆಗೆ ಹೈಕೋರ್ಟ್ ಆದೇಶ

Date:

2021ರಲ್ಲಿ ಜಾರ್ಖಂಡ್‌ನ ಲತೇಹರ್‌ನಲ್ಲಿ ನಡೆದ ಬುಡಕಟ್ಟು ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ತನಿಖೆಯು ಸರಿಯಾಗಿ ನಡೆದಿಲ್ಲವೆಂದು ಜಾರ್ಖಂಡ್ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣವನ್ನು ಮೂರು ತಿಂಗಳ ಒಳಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪ್ರಭಾವನ್ನು ಖಾತ್ರಿ ಪಡಿಸಿಕೊಳ್ಳಬೇಕು. ಅಪರಾಧದಲ್ಲಿ ಅಪರಾಧಿಗಳನ್ನು ರಕ್ಷಿಸಲು ಯತ್ನಿಸಬಾರದು. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

‘ನ್ಯಾಯಯುತ ವಿಚಾರಣೆ ಮಾತ್ರವಲ್ಲ, ನ್ಯಾಯಯುತ ತನಿಖೆ’ ಕೂಡ ಸಾಂವಿಧಾನಿಕ ಹಕ್ಕಿನ ಭಾಗವಾಗಿದೆ. ಕಾನೂನಿನ ಅಡಿಯಲ್ಲಿ ಯಾರೇ ಆಗಿದ್ದರೂ ತಪ್ಪಿತಸ್ತರಿಗೆ ಶಿಕ್ಷೆ, ಸಂತ್ರಸ್ತರಿಗೆ ನ್ಯಾಯ ದೊರೆಯಬೇಕು ಎಂದು ಕೋರ್ಟ್‌ ಒತ್ತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾರ್ಖಂಡ್ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕುಮಾರ್ ದ್ವಿವೇದಿ ಅವರು, ಕನಿಷ್ಠ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರೂ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳಿಗೆ ‘ಕ್ಲೀನ್ ಚಿಟ್’ ನೀಡಿದ್ದ ರಾಜ್ಯ ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರಿದ್ದಾರೆ. ಹೊಸ ತನಿಖೆಗೆ ಆದೇಶಿಸಿದ್ದಾರೆ.

2021ರ ಜೂನ್ 12ರಂದು, ಲತೇಹರ್‌ನ ಗರು ಬ್ಲಾಕ್‌ನ ಪಿರಿ ಗ್ರಾಮದಲ್ಲಿ ಬ್ರಹ್ಮದೇವ್ ಸಿಂಗ್ (24) ಎಂಬಾತನನ್ನು ಪೊಲೀಸರು ಗುಂಡಿಕ್ಕಿ ಕೊಂಡಿದ್ದರು. ಪ್ರಕರಣವನ್ನು ಆರಂಭದಲ್ಲಿ ‘ಅಡ್ಡ ಗುಂಡಿನ ದಾಳಿ’ಯ ಪರಿಣಾಮ ಎಂದು ಪೊಲೀಸರು ಹೇಳಿದ್ದರು. ಕೊಲೆ ಯತ್ನ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೃತರು ಸೇರಿದಂತೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಆದಾಗ್ಯೂ, ಮೃತನ ಕುಟುಂಬವು ಪೊಲೀಸರ ವಿರುದ್ಧ ಕೊಲೆ ಆರೋಪ ಮಾಡಿದ್ದರಿಂದ, ಮತ್ತೊಂದು ಎಫ್‌ಐಆರ್‌ ದಾಖಲಿಸಲಾಗಿತ್ತು. ಎರಡೂ ಎಫ್‌ಐಆರ್‌ಗಳನ್ನು ಜಾರ್ಖಂಡ್‌ನ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸಿತು. ಪೊಲೀಸರ ಯಡವಟ್ಟಿನಿಂದ ಬ್ರಹ್ಮದೇವ್ ಸಾವನ್ನಪ್ಪಿದ್ದಾರೆಂದೂ, ಪ್ರಕರಣವನ್ನು ಮುಚ್ಚಬೇಕೆಂದೂ ವರದಿ ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ?: ಜೀವ ಸಂಪತ್ತಿಗೆ ಸಂಚಕಾರ ತಂದಿದೆ ಜೀವ ವೈವಿಧ್ಯ ತಿದ್ದುಪಡಿ ಮಸೂದೆ

ಸಿಐಡಿ ವರದಿ ವಿರುದ್ಧ ಬ್ರಹ್ಮದೇವ್ ಸಿಂಗ್ ಅವರ ಪತ್ನಿ ಜಿರಾಮಣಿ ದೇವಿ ಮೇಲ್ಮನವಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ನಡೆಸುತ್ತಿದೆ. “ಮೃತ ಬ್ರಹ್ಮದೇವ್ ಸಿಂಗ್ ಅವರು ಪೊಲೀಸರ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಪ್ರಕರಣವನ್ನು ದೋಷವೆಂದು ತಿಳಿಸಲಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಯಾವುದೇ ಶಿಫಾರಸುಗಳಿಲ್ಲ. ವರದಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ತಿಳಿಸಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಉದ್ದೇಶದಿಂದ ಪ್ರಕರಣವು ಹೊಸ ತನಿಖೆಗೆ ಸೂಕ್ತವಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...