ಅಂಬಾನಿ ಒಡೆತನದ ವಂತಾರಾಗೆ 21 ಆನೆಗಳು ರವಾನೆ; ಪ್ರಾಣಿ ಹಕ್ಕು ಹೋರಾಟಗಾರರ ಆಕ್ರೋಶ

Date:

ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆನೆಗಳನ್ನು ವಂತಾರಾಗೆ ರವಾನೆ ಮಾಡುತ್ತಿರುವುದನ್ನು ಪ್ರಾಣಿ ಹಕ್ಕುಗಳ ಹೋರಾಟಗಾರರು ಮತ್ತು ವಿಪಕ್ಷಗಳು ವಿರೋಧಿಸಿವೆ.

ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರವು ರಾಧೇಕೃಷ್ಣ ದೇವಸ್ಥಾನ ಆನೆ ಕಲ್ಯಾಣ ಟ್ರಸ್ಟ್ ಅಡಿಯಲ್ಲಿದ್ದು, ಅದರನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿದ್ದಾರೆ. ಸೆರೆ ಹಿಡಿಯಲಾದ ಆನೆಗಳನ್ನು ಅರುಣಾಚಲ ಪ್ರದೇಶದ ನಮಸಾಯಿಯಿಂದ ಗುಜರಾತ್‌ನ ಜಾಮ್ ನಗರದಲ್ಲಿರುವ ವಂತಾರಾ ಕೇಂದ್ರಕ್ಕೆ ಕರೆದೊಯ್ದಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆನೆಗಳನ್ನು ಸುಮಾರು 3,500 ಕಿಮೀ ದೂರ ಸಾಗಿಸಲಾಗಿದೆ.

ಅಪ್ಪರ್ ಅಸ್ಸಾಂ ಮತ್ತು ಪೂರ್ವ ಅರುಣಾಚಲ ಪ್ರದೇಶದ ಹಚ್ಚ ಹಸಿರಿನ ಜೀವವೈವಿಧ್ಯತೆಯುಳ್ಳು ಪ್ರದೇಶದಿಂದ ಆನೆಗಳನ್ನು ಸೆರೆ ಹಿಡಿದು ಜಾಮ್‌ನಗರದ ಮರುಭೂಮಿ ಪ್ರದೇಶಕ್ಕೆ ಆನೆಗಳನ್ನು ಸಾಗಿಸಲಾಗಿದೆ. ಆನೆಗಳ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ. 3,500 ಕಿ.ಮೀ ಸಾಗಾಟವು ಪ್ರಕೃತಿಯ ಮೇಲಿನ ಶೋಷಣೆಯನ್ನು ಎತ್ತಿ ತೋರಿಸುತ್ತದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನೆಗಳನ್ನು ಗುಜರಾತ್‌ಗೆ ಸಾಗಿಸಲು ಅವಕಾಶ ನೀಡಿದ ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ಪ್ರಾಣಿ ಹಕ್ಕುಗಳ ಹೋರಾಟಗಾರರು ಮತ್ತು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. “ಪ್ರಾಣಿಗಳನ್ನು ತಮ್ಮ ಪ್ರಾಂತ್ಯದಿಂದ ಬೇರೆಲ್ಲಿಗೂ ರವಾನೆ ಮಾಡಲು ಅವಕಾಶ ನೀಡಬಾರದು. ಕೊಂಡೊಯ್ದಿರುವ ಆನೆಗಳನ್ನು ಮರಳಿ ತರಬೇಕು. ಅವುಗಳ ರಕ್ಷಣೆ ಮತ್ತು ಆರೈಕೆಯ ಜವಾಬ್ದಾರಿಯನ್ನು ಅಸ್ಸಾಂ ಸರ್ಕಾರವೇ ಹೊತ್ತುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...