ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಮಾಮಣ್ಣನ್’ ಚಿತ್ರದ ನಟ ವಡಿವೇಲುಗೆ ಅತ್ಯುತ್ತಮ ನಟ ಪ್ರಶಸ್ತಿ

Date:

ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮಾಮಣ್ಣನ್’ ಚಿತ್ರದ ಅಭಿಯನಕ್ಕಾಗಿ ನಟ ವಡಿವೇಲು ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಡಿಸೆಂಬರ್ 21 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಡಿವೇಲು ಅವರು ಪ್ರಶಸ್ತಿಯನ್ನು ಚಿತ್ರದ ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ಅರ್ಪಿಸಿದರು.

ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ನಟಿಸಿದ ಮಾಮಣ್ಣನ್ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿ ಮತ್ತು ವಿಮರ್ಶಾತ್ಮಕವಾಗಿ ಮೆಚ್ಚುಗೆಯನ್ನು ಪಡೆಯಿತು. ಮಾಮಣ್ಣನ್ ಚಿತ್ರದ ಪ್ರಮುಖ ಪಾತ್ರಧಾರಿ ವಡಿವೇಲು ಸೇಲಂನ ಮೀಸಲು ಕ್ಷೇತ್ರದಿಂದ ದಲಿತ ಶಾಸಕನಾಗಿ ನಟಿಸಿದ್ದಾರೆ. ಉದಯನಿಧಿ ಅವರು ಶಾಸಕನ ಮಗನ ಪಾತ್ರಧಾರಿಯಾಗಿ ಜಾತಿ ವಿರೋಧಿ ಯುವಕನ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಡಿವೇಲು, ”ನನಗಿಂತ ಈ ಗೆಲುವು ನಿರ್ದೇಶಕ ಮಾರಿ ಸೆಲ್ವರಾಜ್ ಅವರದ್ದು. ಅವರು ಚಿಕ್ಕ ವಯಸ್ಸಿನಿಂದಲೂ ಬುದ್ಧಿಜೀವಿ. ಅವರು ಬಾಲ್ಯದಲ್ಲಿ ಎದುರಿಸಿದ ಹೋರಾಟಗಳ ಬಗ್ಗೆ ಮಾತನಾಡಿದ್ದಾರೆ ಮತ್ತು ಪ್ರತಿ ದೃಶ್ಯಕ್ಕೂ ಅವರು ಎಲ್ಲವನ್ನೂ ತೆರೆದಿಟ್ಟಿದ್ದಾರೆ. ಮಾಮಣ್ಣನ್ ತುಂಬ ಜನರನ್ನು ತಲುಪಿರುವ ಬಗ್ಗೆ ನನಗೆ ಹೆಮ್ಮೆಯ ಜೊತೆಗೆ ಸಂತೋಷವಾಗಿದೆ. ನಿರ್ದೇಶಕರು ತಮ್ಮದೇ ಆದ ನೋವು ಮತ್ತು ಬಡವರ ನೋವನ್ನು ತೋರಿಸಿದ್ದಾರೆ. ಇದು ನನ್ನ ಪ್ರಶಸ್ತಿಯಲ್ಲ, ಮಾರಿ ಸೆಲ್ವರಾಜ್ ಅವರದು. ಇದು ಉದಯನಿಧಿ ಮತ್ತು ನಿರ್ಮಾಣ ಸಂಸ್ಥೆಯ ಪ್ರಶಸ್ತಿ. ಎಲ್ಲದರ ಜೊತೆಗೆ ಇದು ಅಭಿಮಾನಿಗಳ ಪ್ರಶಸ್ತಿ” ಎಂದು ಹೇಳಿದರು.

ವಡಿವೇಲು ಅವರು ಪ್ರಧಾನವಾಗಿ ಹಾಸ್ಯ ನಟರಾಗಿದ್ದರೂ ಮಾಮಣ್ಣನ ಚಿತ್ರದಲ್ಲಿ ಗಂಭೀರವಾದ ಪಾತ್ರವನ್ನು ನಿರ್ವಹಿಸಿರುವ ಸವಾಲುಗಳನ್ನು ಈ ಸಂದರ್ಭದಲ್ಲಿ ವಿವರಿಸಿದರು. ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ಸಂಯೋಜಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...