6 LPG ಸೇರಿ 22 ಭಾರತೀಯ ಹಡಗುಗಳು ಇನ್ನೂ ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿವೆ

Date:

3 ಲಕ್ಷ ಟನ್‌ ಎಲ್‌ಪಿಜಿ ಹೊತ್ತಿರುವ 6 ಹಡಗುಗಳು ಸೇರಿ ಒಟ್ಟು 22 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ ಎಂದು ಹಡಗು ಸಚಿವಾಲಯವು ಮಂಗಳವಾರ ತಿಳಿಸಿದೆ.

ಸೋಮವಾರ ಮತ್ತು ಮಂಗಳವಾರ, ತಲಾ ಸುಮಾರು 46,500 ಟನ್ ಎಲ್‌ಪಿಜಿ ಹೊತ್ತಿದ್ದ ‘ಶಿವಾಲಿಕ್ ಮತ್ತು ‘ನಂದಾದೇವಿ’ ಎಂಬ ಎರಡು ಹಗಡುಗಳು ಭಾರತವನ್ನು ತಲುಪಿವೆ. ಈ ಎರಡೂ ಹಡಗುಗಳಲ್ಲಿದ್ದ ಎಲ್‌ಪಿಜಿ ಭಾರತ ಅಡುಗೆ ಅನಿಲ ಬವಣೆಯನ್ನು ಕೊಂಚ ತಗ್ಗಿಸಿದೆ. ಆದಾಗ್ಯೂ, ಎಲ್‌ಪಿಜಿ ಬಿಕ್ಕಟ್ಟು ಮುಂದುವರೆದಿದೆ.

ಈ ನಡುವೆ, ಹಾರ್ಮುಜ್ ಜಲಸಂಧಿಯಲ್ಲಿ ಆರು ಎಲ್‌ಪಿಜಿ ಹಡಗುಗಳು, ಒಂದು ಎಲ್‌ಎನ್‌ಜಿ ಟ್ಯಾಂಕರ್, ಕಚ್ಚಾ ತೈಲವಿರುವ ನಾಲ್ಕು ಹಡಗುಗಳು, ರಾಸಾಯನಿಕ ಮತ್ತು ಉತ್ಪನ್ನಗಳನ್ನು ಹೊತ್ತ ಒಂದು ಹಡಗು, ಮೂರು ಕಂಟೈನರ್ ಹಡಗುಗಳು ಹಾಗೂ ಎರಡು ಬಲ್ಕ್ ಕ್ಯಾರಿಯರ್‌ಗಳು ಸೇರಿದಂತೆ ಒಟ್ಟು 22 ಭಾರತೀಯ ಹಡಗುಗಳು ಸಿಲುಕಿವೆ ಎಂದು ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಭಾರತದಿಂದ ರಫ್ತಾಗಬೇಕಿದ್ದ ಸರಕುಗಳನ್ನು ಹೊತ್ತ ಹಗಡುಗಳೂ ಭಾರತ ಬಂದರುಗಳಲ್ಲಿಯೇ ಉಳಿದಿವೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಲ್ಲ ಬಂದರುಗಳು ಹಡಗುಗಳ ಸಂಚಾರ ಮತ್ತು ಸರಕು ಕಾರ್ಯಾಚರಣೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿವೆ. ಹೆಚ್ಚುವರಿ ಸಂಗ್ರಹಣಾ ಸ್ಥಳ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುತ್ತಿವೆ ಎಂದು ಸಚಿವಾಲಯ ಹೇಳಿದೆ.

ಈ ಲೇಖನ ಓದಿದ್ದೀರಾ?: LPG ಹೊತ್ತು ಭಾರತಕ್ಕೆ ಬಂದ ‘ಶಿವಾಲಿಕ್’ ಹಡಗು; ತಣಿಯುವುದೇ ಕೊರತೆ-ಆತಂಕ?

ವಿ.ಒ. ಚಿದಂಬರನಾರ್ ಬಂದರು ಸರಕು ವರ್ಗಾವಣೆ ಕಂಟೈನರ್‌ಗಳಿಗಾಗಿ ಸುಮಾರು 90,000 ಚದರ ಮೀಟರ್ ಜಾಗವನ್ನು ಒದಗಿಸಿದೆ. ಜವಾಹರಲಾಲ್ ನೆಹರು ಬಂದರಿನಲ್ಲಿ ಶೀಘ್ರವಾಗಿ ಹಾಳಾಗುವ ವಸ್ತುಗಳಿರುವ ಕಂಟೈನರ್‌ಗಳ ಸಂಖ್ಯೆಯನ್ನು ಸುಮಾರು 2,000 ರಿಂದ 1,000ಕ್ಕೆ ಇಳಿಸಲಾಗಿದೆ ಎಂದು ಸಿನ್ಹಾ ಹೇಳಿದ್ದಾರೆ.

ಕೆಲವು ಕಂಟೈನರ್‌ಗಳು ದೇಶೀಯ ಮಾರುಕಟ್ಟೆಗೆ ಮರಳಿವೆ. ಕೆಲವು ಓಮನ್‌ನ ಸಲಾಹ್ ಮತ್ತು ಯುಎಇಯ ಖೋರ್ ಫಕ್ಕನ್‌ನಂತಹ ಬಂದರುಗಳಿಗೆ ಪ್ರಯಾಣ ಬೆಳೆಸಿವೆ ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...