2,200 ಕೋಟಿ ರೂ. ಹಗರಣ; 38 ಮಂದಿ ಬಂಧನ

Date:

ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ, ನಕಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಜನರನ್ನು ಆನ್‌ಲೈನ್‌ನಲ್ಲಿ ವಂಚಿಸುತ್ತಿದ್ದ ಜಾಲವನ್ನು ಅಸ್ಸಾಂ ಪೊಲೀಸರು ಭೇದಿಸಿದ್ದಾರೆ. 2,200 ಕೋಟಿ ರೂ. ಹಗರಣವನ್ನು ಬಯಲಿಗೆ ಎಳೆದಿರುವ ಪೊಲೀಸರು, 38 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಸ್ಸಾಂನಲ್ಲಿ ಅನೇಕ ಆನ್‌ಲೈನ್ ವ್ಯಾಪಾರ ಸಂಸ್ಥೆಗಳು ಸೆಬಿ ಮತ್ತು ಆರ್‌ಬಿಐ ಮಾರ್ಗಸೂಚಿಗಳನ್ನು ಅನುಸರಿಸದೆ ವ್ಯವಹಾರ ನಡೆಸುತ್ತಿವೆ ಎಂದು ಇತ್ತೀಚೆಗೆ ವರದಿಯೊಂದು ಪ್ರಕರಣವಾಗಿತ್ತು. ಈ ಬೆನ್ನಲ್ಲೇ, ಆನ್‌ಲೈನ್ ವಂಚನೆಯ ಜಾಲದ ಆಮಿಷಗಳಿಗೆ ಮರುಳಾಗಿ ನಕಲಿ ಷೇರಿ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜನರಲ್ಲಿ ಮನೆ ಮಾಡಿದ್ದರು. ವಂಚನೆಯ ಜಾಲವನ್ನು ಭೇದಿಸಲು ಪೊಲೀಸರ ತಂಡವನ್ನು ರಚಿಸಲಾಗಿತ್ತು.

ಈ ವರದಿ ಓದಿದ್ದೀರಾ?: 2 ಲಕ್ಷ ಸರ್ಕಾರಿ ನೌಕರರ ವೇತನ ತಡೆಹಿಡಿದ ಯೋಗಿ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನ್‌ಲೈನ್ ಟ್ರೇಡಿಂಗ್ ವಂಚನೆಯ ಬಗ್ಗೆ ಮಾತನಾಡಿದ್ದ ಶರ್ಮಾ, “ವಂಚಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಪೊಲೀಸರು ವಂಚನೆಯ ಪ್ರಕರಣ ದಾಖಲಿಸಿದ್ದಾರೆ. ಎಲ್ಲ ವಂಚನೆಯ ಜಾಲಗಳನ್ನು ಭೇದಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಹೇಳಿದ್ದರು.

ವಂಚನೆಯ ಪ್ರಕರಣ ದಾಖಲಿಸಕೊಂಡಿದ್ದ ಸೈಬರ್ ಪೊಲೀಸರು ದಿಬ್ರುಗಢ್‌ನ ಆನ್‌ಲೈನ್ ಉದ್ಯಮಿ ವಿಶಾಲ್ ಫುಕನ್ ಮತ್ತು ಗುವಾಹಟಿಯ ಸ್ವಪ್ನಿಲ್ ದಾಸ್ ಎಂಬ ಆರೋಪಿಗಳು ಸೇರಿದಂತೆ 38 ಮಂದಿಯನ್ನು ಬಂಧಿಸಿದ್ದಾರೆ. ವಿಶಾಲ್ ಫುಕನ್ ಎಂಬಾತ ತನ್ನ ಐಷಾರಾಮಿ ಜೀವನಶೈಲಿಯ ಮೂಲಕ ಜನರನ್ನು ಆಕರ್ಷಿಸುತ್ತಿದ್ದನು. ತನ್ನಲ್ಲಿ ಹೂಡಿಕೆ ಮಾಡಿದರೆ, 60 ದಿನದಲ್ಲಿ 30%ಗೂ ಅಧಿಕ ಲಾಭ ತಂದುಕೊಡುವ ಭರವಸೆ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...