ತಮಿಳುನಾಡು: ನ್ಯಾಯಾಧೀಶೆಯಾದ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ

Date:

ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.

ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಯಾವುದೇ ಹೆಚ್ಚು ಸೌಕರ್ಯವಿಲ್ಲದ ಗಿರಿಧಾಮದ ಗ್ರಾಮದ ಬುಡಕಟ್ಟು ಸಮುದಾಯದ ಯುವ ಮಹಿಳೆಯೊಬ್ಬರು ಈ ಸಾಧನೆ ಮಾಡಿರುವುದಕ್ಕೆ ಸಂತಸವಾಗಿದೆ. ಈ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ ಹಾಗೂ ಮಹಿಳೆಯ ಸಾಧನೆಗೆ ಬೆನ್ನುಲುಬಾಗಿ ನಿಂತ ಆಕೆಯ ತಾಯಿ ಮತ್ತು ಪತಿಗೂ ಕೂಡ ಧನ್ಯವಾದ ತಿಳಿಸುತ್ತೇನೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಲು ಹಿಂಜರಿಕೆಪಡುವ ತಮಿಳುನಾಡಿನವರಿಗೆ ಶ್ರೀಪತಿಯವರ ಸಾಧನೆ ನಿಜಕ್ಕೂ ಮಾದರಿಯಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ದ್ರಾವಿಡ ಮಾದರಿಯ ಡಿಎಂಕೆ ಸರ್ಕಾರ ತಮಿಳುನಾಡಿನಲ್ಲಿ ಇತ್ತೀಚಿಗೆ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನೀತಿಯನ್ನು ಜಾರಿಗೊಳಿಸಿತ್ತು.ಇದರಿಂದಾಗಿಯೇ ಶ್ರೀಪತಿಯಂಥವರು ನ್ಯಾಯಾಧೀಶರಾಗಲು ಸಾಧ್ಯವಾಗಿದೆ” ಎಂದು ಸ್ಟಾಲಿನ್ ತಿಳಿಸಿದ್ದಾರೆ.

ತಿರುವಣ್ಣಮಲೈ ಜಿಲ್ಲೆಯ ಜವುಧು ಗಿರಿಧಾಮದ ಪುಲಿಯೂರು ಗ್ರಾಮದವರಾದ ಶ್ರೀಪತಿ ಅವರು ನವೆಂಬರ್ 2023ರಲ್ಲಿ 200 ಕಿ.ಮೀ ದೂರದ ಚೆನ್ನೈಗೆ ಆಗಮಿಸಿ ಸಿವಿಲ್ ನ್ಯಾಯಾಧೀಶೆಯ ಪರೀಕ್ಷೆ ಬರೆದಿದ್ದರು.

ಪರೀಕ್ಷೆ ಇರುವ ಎರಡು ದಿನದ ಹಿಂದಷ್ಟೆ ಶ್ರೀಪತಿ ಮಗುವಿಗೆ ಜನ್ಮ ನೀಡಿದ್ದರು. ಆರೋಗ್ಯದ ಕಠಿಣ ಸಂದರ್ಭದಲ್ಲಿ ದೃಢ ನಿರ್ಣಯ ತೆಗೆದುಕೊಂಡು ಚೆನ್ನೈಗೆ ಆಗಮಿಸಿ ಪರೀಕ್ಷೆ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...