ದೇಶಾದ್ಯಂತ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್‌

Date:

ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರ್‌ʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪಾಕಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂಟರ್, ಕಿಶೆನ್‌ಗಢ, ಪಟಿಯಾಲ, ಶಿಮ್ಲಾ,ಕಾಂಗ್ರಾ-ಗಗ್ಗಲ್, ಭಟಿಂಡಾ,ಜೈಸಲ್ಮೇರ್, ಜೋಧಪುರ,ಬಿಕಾನೆರ್,ಹಲ್ವಾರಾ,ಪಠಾಣ್‌ಕೋಟ್,ಜಮ್ಮು, ಲೆಹ್, ಮುಂದ್ರಾ, ಜಾಮ್‌ನಗರ್,ಹಿರಾಸರ್ (ರಾಜ್‌ಕೋಟ್),ಪೋರಬಂದರ್,ಕೆಶೋಡ್,ಕಾಂಡ್ಲಾ,ಭುಜ್ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ

ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್‌ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೂ ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತದಿಂದ ಮತ್ತೆ ದಾಳಿ; ಲಾಹೋರ್‌ನ ರಕ್ಷಣಾ ವ್ಯವಸ್ಥೆ ಧ್ವಂಸ

ಗುರುವಾರ ಲಾಹೋರ್‌ನ ಅತ್ಯಂತ ಸೂಕ್ಷ್ಮ ಜಿಲ್ಲೆ ಎಂದು ಗುರುತಿಸಿಕೊಂಡಿರುವ ಗುಲ್ಬೆರ್ಗ್‍ನ ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ರಸ್ತೆಯಲ್ಲಿ ಕೆಲ ನಿಮಿಷಗಳ ಅಂತರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ನಂತರ ಕರಾಚಿ, ಲಾಹೋರ್ ಮತ್ತು ಸಿಯಾಲ್‍ಕೋಟ್ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಮಾನತುಗೊಳಿಸಿರುವುದಾಗಿ ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರ ಘೋಷಿಸಿದೆ. ಅಧಿಕಾರಿಗಳು ಪ್ರದೇಶವನ್ನು ಸೀಲ್ ಮಾಡಿದ್ದು ಸಂಬಂಧವಿಲ್ಲದ ಜನರು ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...