ಸಹಪಾಠಿಗಳಿಂದ 29 ಗಂಟೆ ನಿರಂತರ ಚಿತ್ರಹಿಂಸೆ; ವಿದ್ಯಾರ್ಥಿ ಆತ್ಮಹತ್ಯೆ

Date:

ಕೇರಳದ ಪಶುವೈದ್ಯಕೀಯ ವಿದ್ಯಾರ್ಥಿಯೊಬ್ಬರು ತನ್ನ ಹಾಸ್ಟೆಲ್‌ ಬಾತ್‌ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಆತನ ಆತ್ಮಹತ್ಯೆಗೂ ಮೊದಲು ಹಿರಿಯ ಮತ್ತು ಸಹಪಾಠಿಗಳು 29 ಗಂಟೆಗಳ ಕಾಲ ಆತನಿಗೆ ಚಿತ್ರಿಹಿಂಸೆ ನೀಡಿದ್ದಾರೆ. ಮನವೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಿಬಿಐ ಪೊಲೀಸರು ತಿಳಿಸಿದ್ದಾರೆ.

20 ವರ್ಷದ ಜೆ.ಎಸ್ ಸಿದ್ಧಾರ್ಥನ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಕೇರಳದ ವಯನಾಡ್ ಜಿಲ್ಲೆಯ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದರು.

ಸಿದ್ದಾರ್ಥನ್‌ ಸಾವಿನ ಸಂಬಂಧ 20 ಜನರ ವಿರುದ್ಧ ಸಿಬಿಐ ಶುಕ್ರವಾರ ಎಫ್‌ಐಆರ್ ದಾಖಲಿಸಿದೆ. ಕ್ರಿಮಿನಲ್ ಪಿತೂರಿ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕೇರಳ ರ್‍ಯಾಗಿಂಗ್ ನಿಷೇಧ ಕಾಯಿದೆಯ ನಿಬಂಧನೆಗಳ ಅಡಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ಧಾರ್ಥನ್ ಅವರಿಗೆ ಹಿರಿಯರು ಮತ್ತು ಸಹಪಾಠಿಗಳು ‘ದೈಹಿಕ ಮತ್ತು ಮಾನಸಿಕ’ವಾಗಿ ಹಿಂಸಿದ್ದಾರೆ. ಇದರಿಂದಾಗಿ, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ವೈತಿರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರಶೋಭ್ ಪಿ.ವಿ ಹೇಳಿದ್ದಾರೆ.

“ಫೆಬ್ರವರಿ 16 ರಂದು ಬೆಳಿಗ್ಗೆ 9 ಗಂಟೆಯಿಂದ ಫೆಬ್ರವರಿ 17ರ ಮಧ್ಯಾಹ್ನ 2 ಗಂಟೆವರೆಗೆ ನಿರಂತರವಾಗಿ ಸಿದ್ದಾರ್ಥನ್‌ ಮೇಲೆ ಕೈ ಮತ್ತು ಬೆಲ್ಟ್‌ನಿಂದ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಕ್ರೂರವಾಗಿ ರ್‍ಯಾಗಿಂಗ್ ಮಾಡಿದ್ದಾರೆ. ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಆತ, ಆತ್ಮಹತ್ಯೆ ಬಿಟ್ಟು ಬೇರೆ ದಾರಿ ಇಲ್ಲವೆಂದು ಭಾವಿಸಿ ಫೆ.18ರಂದು ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ವರದಿ ತಿಳಿಸಿದೆ.

“ಪೊಲೀಸರು ಆರಂಭದಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು. ಆದರೆ, ಇದುವರೆಗೆ ನಡೆಸಲಾದ ತನಿಖೆಯಲ್ಲಿ, ಕಾಲೇಜಿನ ಡೀನ್ ಹೇಳಿಕೆ, ವೈದ್ಯಕೀಯ ಪರೀಕ್ಷಾ ವರದಿ ಹಾಗೂ ಕಾಲೇಜಿನ ಆಂಟಿ-ರ್‍ಯಾಗಿಂಗ್ ಸ್ಕ್ವಾಡ್ ನೀಡಿದ ವರದಿಯಿಂದ ಆತನಿಗೆ ಚಿತ್ರಹಿಂಸೆ ನೀಡಿರುವುದು ತಿಳಿದುಬಂದಿದೆ” ಎಂದು ಸಿಬಿಐ ಹೇಳಿದೆ.

“ಆರಂಭದಲ್ಲಿ, ಮತ್ತೊಬ್ಬ ಎರಡನೇ ವರ್ಷದ ವಿದ್ಯಾರ್ಥಿ ಕ್ರಿಶನ್‌ಲಾಲ್ ಹೇಳಿಕೆಯ ಆಧಾರದ ಮೇಲೆ ಸಿಆರ್‌ಪಿಸಿ ಸೆಕ್ಷನ್ 174 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ, ಎಸ್‌ಐ ಪ್ರಶೋಭ್ ಅವರು ಹೊಸ ಸೆಕ್ಷನ್‌ಗಳನ್ನು ಸೇರಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ, ಐಪಿಸಿ ಸೆಕ್ಷನ್‌ 120 (ಅಪರಾಧದ ಪಿತೂರಿ), 306 (ಆತ್ಮಹತ್ಯೆಗೆ ಪ್ರಚೋದನೆ), 323 (ನೋವು ಉಂಟುಮಾಡುವುದು), 342 (ಅಕ್ರಮ ಬಂಧನ), 506 (ಬೆದರಿಕೆ), 355 (ದಾಳಿ) ಮತ್ತು ಕೇರಳ ರ್‍ಯಾಗಿಂಗ್ ನಿಷೇಧ ಕಾಯಿದೆಯ ಸೆಕ್ಷನ್ 4 ಮತ್ತು 3ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಸಿಬಿಐ ತಿಳಿಸಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...