24 ಗಂಟೆಗಳಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ; ವಾರದಲ್ಲಿ 35 ಹುಸಿ ಕರೆ!

Date:

ದೇಶದಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳ ಪ್ರಮಾಣ ಅಧಿಕವಾಗುತ್ತಿದೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಒಂದು ವಾರದಲ್ಲೇ ಬರೋಬ್ಬರಿ 35 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿದೆ ಎಂದು ವರದಿಯಾಗಿದೆ.

ನಿನ್ನೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರಾ ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತಿರುಗಿಸಲಾಗಿದೆ. ಜೈಪುರ- ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೂ ಬಾಂಬ್ ಬೆದರಿಕೆ ಬಂದಿದ್ದು, ಪರಿಶೀಲಿಸಿದಾಗ ಅದು ನಕಲಿ ಎಂಬುದು ಸಾಬೀತಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ವಿಮಾನವು ಹೊರಡುವ ಮುನ್ನ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಬಾಂಬ್ ಬೆದರಿಕೆ ಕರೆ ಬಂದ ಕಾರಣ ಜೈಪುರ-ದುಬೈ ವಿಮಾನವನ್ನು ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗುವುದು ವಿಳಂಬವಾಯಿತು. ಇಂದು ಬೆಳಗ್ಗೆ 6:10ಕ್ಕೆ ಟೇಕ್-ಆಫ್ ಆಗಬೇಕಿದ್ದ ವಿಮಾನ 7:45ಕ್ಕೆ ದುಬೈಗೆ ತೆರಳಿದೆ. ದೆಹಲಿಯಿಂದ ಲಂಡನ್‌ಗೆ ಹಾರಬೇಕಾಗಿದ್ದ ವಿಸ್ತಾರಾ ವಿಮಾನವು ಫ್ರಾಂಕ್‌ಫರ್ಟ್‌ನಲ್ಲಿ ಲ್ಯಾಂಡ್ ಆಗಿ ಬಳಿಕ ಲಂಡನ್‌ಗೆ ಹಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಾಮಾಜಿಕ ಜಾಲತಾಣದ ಮೂಲಕ ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ

ಸೋಮವಾರದಿಂದ ಈವರೆಗೆ ಕನಿಷ್ಠ 35 ವಿಮಾನಗಳಿಗೆ ಇಂತಹ ಬಾಂಬ್ ಬೆದರಿಕೆ ಕರೆ/ ಸಂದೇಶಗಳು ಬಂದಿದೆ. ಈ ನಿಟ್ಟಿನಲ್ಲಿ ಈ ನಕಲಿ ಬಾಂಬ್ ಬೆದರಿಕೆ ಹಾಕುವವರ ವಿರುದ್ದ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ನಕಲಿ ಬಾಂಬ್ ಬೆದರಿಕೆಗಳಿಂದಾಗಿ ಆಗಿರುವ ನಷ್ಟವನ್ನು ಆರೋಪಿಗಳಿಂದಲೇ ವಸೂಲಿ ಮಾಡಬೇಕು ಎಂದು ವಿಮಾನಯಾನ ಸಂಸ್ಥೆಗಳು ಆಗ್ರಹಿಸಿದೆ.

ಇನ್ನು ಬಹುತೇಕ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಅಪ್ರಾಪ್ತರು ಅಥವಾ ಪ್ರಾಂಕ್‌ಸ್ಟರ್‌ಗಳು ಮಾಡಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...