3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

Date:

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್ 18ರಂದು ನಿಧನರಾಗಿದ್ದಾರೆ. ಹಲವು ಬಾಲಿವುಡ್ ಸಿನಿಮಾಗಳಲ್ಲಿ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿರುವ ಪೋತರ್ ಅವರಿಗೆ 91 ವರ್ಷ ವಯಸ್ಸಾಗಿತ್ತು.

ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಥಾಣೆಯ ಜುಪಿಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತಿಮ ವಿಧಿವಿಧಾನಗಳನ್ನು ಇಂದು(ಆಗಸ್ಟ್ 19) ಥಾಣೆಯಲ್ಲಿ ನಡೆಸಲಾಗುತ್ತದೆ. ವರ್ಷಗಳಲ್ಲಿ, ಅಚ್ಯುತ್ ಹಲವಾರು ಹಿಂದಿ ಮತ್ತು ಮರಾಠಿ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

3 ಈಡಿಯಟ್ಸ್, ಅರ್ಧ್ ಸತ್ಯ, ಯೇ ದಿಲ್ಲಗಿ ಮುಂತಾದ ಚಲನಚಿತ್ರಗಳ ಜೊತೆಗೆ, ಅವರು ವಾಗ್ಲೆ ಕಿ ದುನಿಯಾ, ಮಜ್ಹಾ ಹೋಶಿಲ್ ನಾ, ಮಿಸ್ ತೆಂಡೂಲ್ಕರ್, ಭಾರತ್ ಕಿ ಖೋಜ್ ಸೇರಿದಂತೆ ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಅಚ್ಯುತ ಪೋತರ್ ತಮ್ಮ 44ನೇ ವಯಸ್ಸಿನಲ್ಲಿ ಸಿನಿಮಾ ಲೋಕಕ್ಕೆ ಪ್ರವೇಶಿಸಿದರು. ಪೋತರ್ ಯಾವುದೇ ತರಬೇತಿ ಪಡೆದ ನಟರಲ್ಲ. ಪದವಿ ಪಡೆದ ನಂತರ ಅವರು ಮೊದಲು ಮಧ್ಯಪ್ರದೇಶದ ರೇವಾದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಅದಾದ ಬಳಿಕ ಮದುವೆಯ ಒಂದು ವರ್ಷದೊಳಗೆ ಭಾರತೀಯ ಸೇನೆಗೆ ಸೇರಿದರು.

ಅವರ ಅಧಿಕಾರಾವಧಿ ಮುಗಿದ ನಂತರ, 1967ರಲ್ಲಿ ಕ್ಯಾಪ್ಟನ್ ಹುದ್ದೆಯಿಂದ ನಿವೃತ್ತರಾದರು. ನಂತರ ಅವರು ಇಂಡಿಯನ್ ಆಯಿಲ್‌ನಲ್ಲಿ ಕಾರ್ಯನಿರ್ವಾಹಕರಾಗಿ 25 ವರ್ಷಗಳ ಕಾಲ ಕೆಲಸ ಮಾಡಿದರು. 1992ರಲ್ಲಿ 58ನೇ ವಯಸ್ಸಿನಲ್ಲಿ ನಿವೃತ್ತರಾದರು.

ಇಂಡಿಯನ್ ಆಯಿಲ್‌ನಲ್ಲಿದ್ದಾಗ, ಪೋತರ್ ನಾಟಕಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಅದರಿಂದಾಗಿ ನಟನೆಯ ಉತ್ಸಾಹ ಹೆಚ್ಚಾಗಿ 1980ರಲ್ಲಿ ಹಿಂದಿ ಚಲನಚಿತ್ರ ಆಕ್ರೋಶ್‌ನೊಂದಿಗೆ ತಮ್ಮ ಚಲನಚಿತ್ರ ಜೀವನಕ್ಕೆ ಪಾದಾರ್ಪಣೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...