ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ: 56ಕ್ಕೆ ತಲುಪಿದ ಸಾವಿನ ಸಂಖ್ಯೆ

Date:

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುತ್ತಾ ಸಾಗುತ್ತಿದೆ. ಅಸ್ಸಾಂ ಪ್ರವಾಹದಲ್ಲಿ ಶನಿವಾರ ಇನ್ನೂ ಮೂವರು ಸಾವನ್ನಪ್ಪಿದ್ದು ಈಶಾನ್ಯದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆಯನ್ನು 56ಕ್ಕೆ ತಲುಪಿದೆ.

ಕ್ಯಾಚಾರ್, ಕರೀಂಗಂಜ್ ಜಿಲ್ಲೆ ಮತ್ತು ಹೈಲಕಂಡಿ ಜಿಲ್ಲೆಗಳಲ್ಲಿ ಅಧಿಕ ಸಾವು ಸಂಭವಿಸಿದೆ. ಅಸ್ಸಾಂ ಮತ್ತು ಮಣಿಪುರ ಎರಡರಲ್ಲೂ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೇಂದ್ರ ಜಲ ಆಯೋಗವು ಹಲವು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇದನ್ನು ಓದಿದ್ದೀರಾ?  ಅಸ್ಸಾಂ ಪ್ರವಾಹ: ಒಂದು ಸಾವು, 9 ಜಿಲ್ಲೆಯ 1.98 ಲಕ್ಷ ಜನಕ್ಕೆ ತೊಂದರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಪ್ರವಾಹ ಪೀಡಿತ ಜನರ ಸಂಖ್ಯೆ 3.49 ಲಕ್ಷವಾಗಿತ್ತು. ಈ ಸಂಖ್ಯೆಯು ಶನಿವಾರದ ವೇಳೆ ಆರು ಲಕ್ಷಕ್ಕೆ ಏರಿದೆ. ನಾಗಾಂವ್ ಜಿಲ್ಲೆಯಲ್ಲಿ 2.79 ಲಕ್ಷ ಜನರು ಹಾನಿಗೊಳಗಾಗಿದ್ದಾರೆ. ಒಟ್ಟಾರೆಯಾಗಿ 10 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 187 ಪರಿಹಾರ ಶಿಬಿರಗಳಲ್ಲಿ 41,000ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ.

ನೂರಾರು ಜನರು ಪ್ರವಾಹದಲ್ಲಿ ಸಿಲುಕಿರುವ ಕಾರಣ, ಎನ್‌ಡಿಆರ್‌ಎಫ್‌ ಹೆಚ್ಚುವರಿ ತಂಡವನ್ನು ಶನಿವಾರ ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಗೆ ವಿಮಾನದಲ್ಲಿ ರವಾನಿಸಿದೆ. ಈ ತಂಡವನ್ನು ಗುವಾಹಟಿಯ ಬೋರ್ಜಾರ್‌ನ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ ಇಂಟರ್‌ನ್ಯಾಶನಲ್ (ಎಲ್‌ಜಿಬಿಐ) ವಿಮಾನ ನಿಲ್ದಾಣದಿಂದ ಕ್ಯಾಚಾರ್‌ನಲ್ಲಿರುವ ಸಿಲ್ಚಾರ್ ವಿಮಾನ ನಿಲ್ದಾಣಕ್ಕೆ ರವಾನಿಸಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್‌ನ 1ನೇ ಬೆಟಾಲಿಯನ್ ಜಿಲ್ಲಾಡಳಿತ ಮತ್ತು ರಾಜ್ಯ ಆಡಳಿತಕ್ಕೆ ಸಹಾಯ ಮಾಡುತ್ತಿದೆ. ಎನ್‌ಡಿಆರ್‌ಎಫ್‌ ನಿಯಮಿತವಾಗಿ ಪ್ರವಾಹ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಿದೆ. ದೋಬೋಕಾ ಮತ್ತು ಹೊಜೈನಲ್ಲಿರುವ ಕಂದುಲಿಮರಿ ಮತ್ತು ಬಲಿರಾಮ್ ಪಥರ್ ಗ್ರಾಮಗಳಲ್ಲಿ 47 ಮಕ್ಕಳು ಮತ್ತು ಒಬ್ಬ ಗರ್ಭಿಣಿ ಮಹಿಳೆ ಸೇರಿದಂತೆ ಒಟ್ಟು 149 ಜನರನ್ನು ರಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...