ಜಮ್ಮು ಕಾಶ್ಮೀರದ ಕಥುವಾದಲ್ಲಿ ಮತ್ತೆ ಎನ್‌ಕೌಂಟರ್; ಸೇನೆ ಬಲೆಯಲ್ಲಿ ಮೂವರು ಉಗ್ರರು

Date:

ಜಮ್ಮು ಕಾಶ್ಮೀರದ ಕಥುವಾದಲ್ಲಿ ಸೋಮವಾರ ಉಗ್ರರ ಮತ್ತು ಭದ್ರತಾ ಪಡೆಯ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಸೇನೆಯತ್ತ ಉಗ್ರರು ಗುಂಡು ಹಾರಿಸಿದ ಬೆನ್ನಲ್ಲೇ ಈ ಚಕಮಕಿ ಆರಂಭವಾಗಿದೆ. ಕಳೆದ 9 ದಿನದಲ್ಲಿ ಕಥುವಾದಲ್ಲಿ ನಡೆಯುತ್ತಿರುವ 3ನೇ ಕಾರ್ಯಾಚರಣೆ ಇದಾಗಿದೆ.

ರಾಮಕೋಟೆ ಪ್ರದೇಶದ ಪಂಜ್‌ತೀರ್ಥಿಯಲ್ಲಿ ನಡೆದಿರುವ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಾತ್ರಿ ವಿಧಿಸಿರುವ ಪಹರೆಯಲ್ಲಿ ಮೂವರು ಉಗ್ರಗಾಮಿಗಳು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಇವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಪ್ಪತ್ತು ಗಂಟೆಗಳ ಸುಧೀರ್ಘ ಕಾರ್ಯಾಚರಣೆಯಲ್ಲಿ ಇಬ್ಬರು ಜೈಶ್-ಇ-ಮೊಹ್ಮದ್ ಸಂಘಟನೆ ಉಗ್ರರು ಹತರಾದ ಎರಡು ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಕಳೆದ ಗುರುವಾರ ಮಾ.27ರಂದು ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಸೈನಿಕರು ಮೃತಪಟ್ಟಿದ್ದರು. ಕಾಡಿನಲ್ಲಿ ಅಡಗಿಕೊಂಡಿದ್ದ ಪಾಕಿಸ್ತಾನಿ ಉಗ್ರರ ಜತೆ ಈ ಚಕಮಕಿ ನಡೆದಿತ್ತು. ಮಾ.23 ರಂದು ಸೇನೆ ಹಾಗೂ ಉಗ್ರರ ನಡುವೆ ನಡೆದ ಕಾಳಗದಲ್ಲಿ ಒಬ್ಬ ಸ್ಥಳೀಯ ಬಾಲಕಿ ಗಾಯಗೊಂಡಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಉಗ್ರಗಾಮಿಗಳು ಎನ್ನಲಾದ ಮೂವರು ತಪ್ಪಿಸಿಕೊಂಡಿದ್ದಾರೆ ಹಾಗೂ ಅವರ ಸಂಶಯಾಸ್ಪದ ಚಲನ ವಲನ ಕಂಡುಬರುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ವೈಮಾನಿಕ ಕಣ್ಗಾವಲು ಮತ್ತು ಶ್ವಾನಪಡೆಯ ಸಹಾಯದಿಂದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಡಿಐಜಿ ಶಿವಕುಮಾರ್ ಶರ್ಮಾ, ಕಟ್ಟಕಡೆಯ ಉಗ್ರಗಾಮಿ ಹತನಾಗುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಯಾವುದೇ ಅನುಮಾನಾಸ್ಪದ ಚಲನ ವಲನಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಗಡಿಭಾಗದ ನಿವಾಸಿಗಳಲ್ಲಿ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...