ತಮಿಳುನಾಡು | ದಿನಕ್ಕೆ 2 ಬಾರಿ 30 ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಸಿಬ್ಬಂದಿಗೆ ದಿನಕ್ಕೆ ಕೇವಲ 100 ರೂ ವೇತನ

Date:

ತಮಿಳುನಾಡಿನ ಗ್ರಾಮೀಣ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 32,900 ನೈರ್ಮಲ್ಯ ಸಿಬ್ಬಂದಿಗೆ ಜೀವನ ನೆಡೆಸುವುದೇ ದುಸ್ತರವಾಗಿದೆ. ನಿತ್ಯ ಹತ್ತಾರು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಇವರು ಕಳೆದ 10 ವರ್ಷಗಳಿಂದ ಕೇವಲ 100 ರೂ. ವೇತನ ಪಡೆಯುತ್ತಿದ್ದಾರೆ. ದುಃಖದ ವಿಷಯವೆಂದರೆ ಸಿಗುವ 100 ರೂ. ಕೂಡ ಬಹುತೇಕರಿಗೆ ನೀಡಲಾಗುತ್ತಿಲ್ಲ.

ಗ್ರಾಮೀಣ ಪ್ರಾಥಮಿಕ ಶಾಲೆಗಳ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 100 ರೂ. ವೇತನ ಪಡೆದರೆ, ಮಾಧ್ಯಮಿಕ ಶಾಲೆಗಳಲ್ಲಿ 1500 ರೂ., ಪ್ರೌಢಶಾಲೆಗಳಲ್ಲಿ 2250 ರೂ., ಹಾಗೂ ಉನ್ನತ ಮಾಧ್ಯಮಿಕ ಶಾಲೆಗಳ ಕಾರ್ಮಿಕರಿಗೆ 3000 ರೂ. ವೇತನ ನೀಡಲಾಗುತ್ತಿದೆ.

ನಾಮಕ್ಕಲ್ ಜಿಲ್ಲೆಯ 400 ವಿದ್ಯಾರ್ಥಿಗಳಿರುವ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ನಿತ್ಯ 30 ಮೂತ್ರಾಲಯಗಳು ಹಾಗೂ 20 ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ. ನೈರ್ಮಲ್ಯ ಕೆಲಸಕ್ಕಾಗಿಯೇ ದಿನಕ್ಕೆ ಮೂರಕ್ಕೂ ಹೆಚ್ಚು ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ಇವರಿಗೆ ಸಿಗುವ ವೇತನ ಕೇವಲ 3 ಸಾವಿರ ರೂ. ಮಾತ್ರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುವ ಕಾರಣಕ್ಕಾಗಿ ಮಾತ್ರ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ವೇತನವು ತುಂಬಾ ಕಡಿಮೆಯಾಗಿದ್ದು, ನಿಯಮಿತವಾಗಿ ಕೂಡ ನೀಡುತ್ತಿಲ್ಲ. ಕೆಲವು ಬಾರಿ 10 ತಿಂಗಳಾದರೂ ವೇತನ ನೀಡುವುದಿಲ್ಲ” ಎಂದು ನಾಮಕ್ಕಲ್‌ನಲ್ಲಿ ಕಾರ್ಯನಿರ್ವಹಿಸುವ ಮಹಿಳೆಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

2023-24ನೇ(ಏಪ್ರಿಲ್‌ವೆರೆಗೂ) ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯು ನೈರ್ಮಲ್ಯ ಕಾರ್ಮಿಕರ ವೇತನ ಹಾಗೂ ಪಂಚಾಯತ್‌ ಯೂನಿಯನ್ ಶಾಲೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತಾ ಉಪಕರಣಗಳ ಖರೀದಿಗಾಗಿ 62.7 ಕೋಟಿ ರೂ. ಮಂಜೂರು ಮಾಡಿದೆ.

2022-23ರಲ್ಲಿ 63 ಕೋಟಿ ರೂ ಮಂಜೂರು ಮಾಡಲಾಗಿತ್ತು.ಅಂಕಿಅಂಶಗಳ ವರದಿಗಳ ಪ್ರಕಾರ ಶಾಲೆಗಳ ನೈರ್ಮಲ್ಯಕ್ಕಾಗಿ 2015ರಿಂದಲೂ ಇಷ್ಟೆ ಅನುದಾನವನ್ನು ನೀಡಲಾಗುತ್ತಿದೆ.

ಗ್ರಾಮೀಣ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಹೇಳುವ ಪ್ರಕಾರ ಕಳೆದ ಒಂದು ದಶಕದಿಂದ ವೇತನವನ್ನು ಪರಿಷ್ಕರಣೆ ಮಾಡಿಲ್ಲ. ವೇತನ ತುಂಬ ಕಡಿಮೆ, ಅನಿಯಮಿತವಾಗಿದೆ. ಇದರಿಂದಾಗಿ ಹಲವು ಕಾರ್ಮಿಕರು ತಮ್ಮ ಕೆಲಸವನ್ನು ಬಿಟ್ಟು ಹೋಗುತ್ತಿದ್ದಾರೆ ಎನ್ನುತ್ತಾರೆ. ಇನ್ನೂ ಕೆಲವು ಶಾಲೆಗಳಲ್ಲಿ ಶಿಕ್ಷಕರೆ ಹೆಚ್ಚುವರಿಯಾಗಿ ತಮ್ಮ ಹಣದಿಂದ ನೈರ್ಮಲ್ಯ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡುತ್ತಿದ್ದಾರೆ.

ಸ್ನಾತಕೋತ್ತರ ಪದವಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಎ ರಾಮು, ಪ್ರತಿ ಶಾಲೆಗೆ ಇಬ್ಬರು ನೈರ್ಮಲ್ಯ ಕಾರ್ಮಿಕರು, ಓರ್ವ ಭದ್ರತಾ ಸಿಬ್ಬಂದಿ ಹಾಗೂ ಒಬ್ಬರು ಕಚೇರಿ ಸಹಾಯಕರನ್ನು ಸರ್ಕಾರದಿಂದ ನೇಮಿಸುವಂತೆ ನಮ್ಮ ಸಂಘಟನೆ ಬೇಡಿಕೆಯಿಟ್ಟಿದೆ. ಮನ್‌ರೇಗಾ ಯೋಜನೆಯಡಿ 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ನಿರ್ಮಲ್ಯ ಕೆಲಸಗಾರರಿಗೆ ನಿತ್ಯ 300 ರೂ. ವೇತನ ನೀಡಬೇಕು.ರಾಜ್ಯ ಸರ್ಕಾರ ನೈರ್ಮಲ್ಯ ಕೆಲಸಗಾರರಿಗೆ ತಿಂಗಳಿಗೆ 10 ಸಾವಿರ ರೂ. ವೇತನ ನಿಗದಿಪಡಿಸಬೇಕು” ಎಂದು  ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...