ತೆಲಂಗಾಣದಲ್ಲಿ ಒಂದೇ ತಿಂಗಳಲ್ಲಿ 900 ಬೀದಿನಾಯಿಗಳ ಹತ್ಯೆ

Date:

ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಹೊಂಡವೊಂದರಲ್ಲಿ 300ಕ್ಕೂ ಹೆಚ್ಚು ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಬೀದಿನಾಯಿಗಳ ಸಾಮೂಹಿಕ ಹತ್ಯೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 900ಕ್ಕೂ ಹೆಚ್ಚು ಬೀದಿನಾಯಿಗಳನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ರಾಜಧಾನಿ ಹೈದರಾಬಾದ್‌ನಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಪೆಗದಪಲ್ಲಿ ಗ್ರಾಮದಲ್ಲಿ ಗುರುವಾರ ಈ ಕೃತ್ಯ ಬೆಳಕಿಗೆ ಬಂದಿದೆ. ಗ್ರಾಮಪಂಚಾಯತ್ ಸರಪಂಚರ ಆದೇಶದ ಮೇರೆಗೆ ಹತ್ಯೆ ನಡೆಸಲಾಗಿದೆ ಎಂದು ಪ್ರಾಣಿ ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಭವನಗಳು ರಾಜಕೀಯ ಪಕ್ಷಪಾತದ ನೆಲೆವೀಡು; ರಾಜ್ಯಪಾಲ ಹುದ್ದೆಯ ಮರುವಿಮರ್ಶೆ ನಡೆಯಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಬಿಡಾಡಿ ಪ್ರಾಣಿಗಳ ಪ್ರತಿಷ್ಠಾನದ ಪ್ರೀತಿ ಮುದವಂತ್ ನೀಡಿದ ದೂರಿನ ಆಧಾರದಲ್ಲಿ, ಗ್ರಾಮಪಂಚಾಯತ್ ಸರಪಂಚರು ಹಾಗೂ ಕಾರ್ಯದರ್ಶಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 325 ಮತ್ತು 3(5), ಹಾಗೂ ಪ್ರಾಣಿಗಳ ವಿರುದ್ಧದ ಕ್ರೌರ್ಯ ತಡೆ ಕಾಯ್ದೆ–1960ರ ಸೆಕ್ಷನ್ 11(1)(ಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗ್ರಾಮಸ್ಥರ ಹೇಳಿಕೆಯ ಪ್ರಕಾರ, ಇಬ್ಬರು ಮಹಿಳೆಯರು ವಿಷಪೂರಿತ ಚುಚ್ಚುಮದ್ದು ನೀಡುವ ಮೂಲಕ ಬೀದಿನಾಯಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರೀತಿ ಮುದವಂತ್ ಆರೋಪಿಸಿದ್ದಾರೆ. ಇದಕ್ಕೂ ಮೊದಲು ಕಾಮರೆಡ್ಡಿ, ಹನುಮಕೊಂಡ ಹಾಗೂ ರಂಗಾರೆಡ್ಡಿ ಜಿಲ್ಲೆಗಳಲ್ಲಿ ಕಳೆದ ಕೆಲ ವಾರಗಳ ಹಿಂದೆ 600ಕ್ಕೂ ಹೆಚ್ಚು ಶ್ವಾನಗಳನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...