ಕೃಷಿ ತ್ಯಾಜ್ಯವನ್ನು ಸುಡುವ ರೈತರಿಗೆ ಗರಿಷ್ಠ 30 ಸಾವಿರ ರೂ. ದಂಡ; ಕೇಂದ್ರ ಸರ್ಕಾರ ಆದೇಶ

Date:

ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುವ ರೈತರಿಗೆ ವಿಧಿಸಲಾಗುವ ದಂಡವನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ, ಕೃಷಿ ತ್ಯಾಚ್ಯಗಳನ್ನು ಸುಡುವ ರೈತರಿಗೆ ಗರಿಷ್ಠ 15,000 ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ, 30,000 ರೂ.ಗೆ ಏರಿಕೆ ಮಾಡಿದೆ.

ದೆಹಲಿಯ ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಅಂತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. ದೆಹಲಿ ಮತ್ತು ಸುತ್ತಮುತ್ತ ಗಾಳಿ ಹೆಚ್ಚು ಮಾಲಿನ್ಯಗೊಳ್ಳಲು ರೈತರು ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹೆಚ್ಚುವುದೇ ಪ್ರಮುಖ ಕಾರಣವೆಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ, ದಂಡದ ಮೊತ್ತವನ್ನು ದ್ವಿಗುಣಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.

ಕೃಷಿ ತ್ಯಾಜ್ಯಗಳನ್ನು ಸುಡುವ ರೈತರಿಗೆ ಪರಿಸರ ಪರಿಹಾರವೆಂದು ದಂಡ ವಿಧಿಸಲಾಗುತ್ತದೆ. ಕೇಂದ್ರದ ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರು 5,000 ರೂ. ದಂಡ ಪಾವತಿಸಬೇಕಾಗುತ್ತದೆ. ಎರಡು ಎಕರೆಯಿಂದ ಐದು 10 ಎಕರೆ ಜಮೀನು ಹೊಂದಿರುವ ರೈತರಿಗೆ 10,000 ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ, 10 ಎಕರೆಗಿಂತ ಹೆಚ್ಚು ಭೂಮಿ ಹೊಂದಿದ್ದರೆ, ಅಂತಹ ರೈತರಿಗೆ 30,000 ರೂ. ದಂಡ ವಿಧಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...