ಅಸ್ಸಾಂ | ಭಾರೀ ಮಳೆಯಿಂದ ಪ್ರವಾಹ: 35 ಸಾವಿರ ಮಂದಿ ಸ್ಥಳಾಂತರ

Date:

  • ಅಸ್ಸಾಂ ಪ್ರವಾಹದಿಂದ 4.88 ಲಕ್ಷ ಜನರಿಗೆ ಹಾನಿ
  • ಭೂತಾನ್ ನಲ್ಲಿ ಸುರಿಯುತ್ತಿರುವ ಮಳೆ ರಾಜ್ಯದ ಮೇಲೆ ಪರಿಣಾಮ

ಅಸ್ಸಾಂ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಗಂಭೀರ ಸ್ಥಿತಿ ತಲುಪಿದೆ. ಈ ಹಿನ್ನೆಲೆ ಸುಮಾರು 35 ಸಾವಿರ ಮಂದಿಯನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರೀ ಮಳೆಯ ಪರಿಣಾಮ ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ಇದುವರೆಗೆ ಮಳೆಯಿಂದ ರಾಜ್ಯದಲ್ಲಿ 4,88,525 ಲಕ್ಷ ಜನರು ತೊಂದರೆಗೀಡಾಗಿದ್ದಾರೆ ಎಂದು ಅಸ್ಸಾಂನ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ (ಜೂನ್ 23) ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರೀ ಮಳೆಯಿಂದ ರಾಜ್ಯದೆಲ್ಲೆಡೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು ಅಸ್ಸಾಂ ರಾಜ್ಯದ ನಾನಾ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಸ್ಸಾಂ ರಾಜ್ಯದಲ್ಲಿ ಪ್ರವಾಹಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಪ್ರವಾಹಪೀಡಿತ ಸ್ಥಳದಲ್ಲಿರುವ ಸುಮಾರು 4.88 ಲಕ್ಷ ಜನರ ಬದುಕು ಅಸ್ತವ್ಯಸ್ತವಾಗಿದೆ. ಬ್ರಹ್ಮಪುತ್ರ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಈವರೆಗೆ 19 ಜಿಲ್ಲೆಗಳು, ನಾಲ್ಕು ಉಪ ವಿಭಾಗಗಳು ಸಂಪೂರ್ಣವಾಗಿ ಪ್ರವಾಹಪೀಡಿತವಾಗಿವೆ. ಭಾರೀ ಮಳೆಯು ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಸಿಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸರ್ಕಾರೇತರ ಸಂಘಟನೆಗಳು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕೆಲವು ರಾಜ್ಯಗಳಲ್ಲಿ ಮಳೆ

ಅಸ್ಸಾಂ ಹೊರತುಪಡಿಸಿ ಹರಿಯಾಣ, ಪಂಜಾಬ್ ನ ಕೆಲವು ಭಾಗಗಳಲ್ಲಿ ಶುಕ್ರವಾರ ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿ ಟಕ್ಕರ್‌ | ದೇವದಾಸ್‌ಗೆ ರಾಹುಲ್‌ ಗಾಂಧಿ ಹೋಲಿಸಿ ಪೋಸ್ಟರ್

ಹರಿಯಾಣದ ಅಂಬಾಲ, ಕರ್ನಾಲ್, ರೋಹಕ್, ಪಂಚಕುಲಾ, ಕುರುಕ್ಷೇತ್ರ ಮತ್ತು ಫತೇಹಬಾದ್ ನಲ್ಲಿ ಮಳೆಯಾಗಿದೆ. ಪಂಜಾಬ್ ನ ಫತೇಗಢ ಸಾಹಿಬ್, ಎಸ್ಬಿಎಸ್ ನಗರ ಮತ್ತು ರೂಪನಗರ ಸಾಧಾರಣ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವು ದಿನಗಳಿಂದ ಎರಡೂ ರಾಜ್ಯಗಳಲ್ಲಿ ಬಿಸಿಲ ಧಗೆ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.

ಭೂತಾನ್‌ನ ಬೆಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಅಸ್ಸಾಂ ನದಿಗಳ ಮೇಲೆ ಬೀರಿದ್ದು ನದಿಗಳು ಉಕ್ಕಿ ಹರಿಯುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...