₹371 ಕೋಟಿ ಭಾರೀ ಹಗರಣ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಇಡಿಯಿಂದ ಕ್ಲೀನ್ ಚಿಟ್

Date:

ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್‌ ಚಿಟ್‌ ನೀಡಿದೆ. ಪ್ರಕರಣದಿಂದ ನಾಯ್ಡು ಅವರನ್ನು ಖುಲಾಸೆ ಗೊಳಿಸಿದೆ.

2014 ಮತ್ತು 2019ರ ನಡುವೆ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ. ಚಂದ್ರಬಾಬು ನಾಯ್ಡು ಅವರು ರಾಜ್ಯ ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ ಎಂದು ಆರೋಪಿಸಲಾಗಿತ್ತು. ಹಗರಣದ ತನಿಖೆಯನ್ನು ಹಿಂದಿನ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರವು ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಐಡಿ, 2023ರ ಸೆಪ್ಟೆಂಬರ್ 9ರಂದು ನಾಯ್ಡು ಅವರನ್ನು ಬಂಧಿಸಿತ್ತು. 50 ದಿನಗಳ ಕಾಲ ಜೈಲಿನಲ್ಲಿದ್ದ ನಾಯ್ಡು, ಕಳೆದ ವರ್ಷ ಅಕ್ಟೋಬರ್ 31ರಂದು ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು.

ಈ ನಡುವೆ, ಹಗರಣದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಕೂಡ ತನಿಖೆ ನಡೆಸಿದೆ. ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಎರಡು ಖಾಸಗಿ ಸಂಸ್ಥೆಗಳಾದ ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ (ಇಂಡಿಯಾ) ಮತ್ತು ಡಿಸೈನ್‌ಟೆಕ್ ಸಿಸ್ಟಮ್‌ ಕಂಪನಿಗಳ ಮೇಲೆ ಸೋಮವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 23.54 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿತ ಎರಡು ಖಾಸಗಿ ಸಂಸ್ಥೆಗಳು ಮತ್ತು ಅವುಗಳ ಕಾರ್ಯನಿರ್ವಾಹಕರಿಗೆ ಸಂಬಂಧಿಸಿದ 151 ಕೋಟಿ ರೂ.ಗಳ ಹಣದ ಜಾಡು ಪತ್ತೆ ಮಾಡಲಾಗಿದೆ. ಆದರೂ, ಆ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರ ಪಾತ್ರವನ್ನು ದೃಢೀಕರಿಸುವ ಯಾವುದೇ ಪುರಾವೆಗಳು ತನಿಖೆ ವೇಳೆ ಕಂಡುಬಂದಿಲ್ಲ ಎಂದು ಇ.ಡಿ ಹೇಳಿದೆ. ನಾಯ್ಡು ಅವರಿಗೆ ಹಗರಣದಲ್ಲಿ ಕ್ಲೀನ್‌ ಚಿಟ್ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...