ರಾಮ ಮಂದಿರದಲ್ಲಿ 20 ಅರ್ಚಕರ ಹುದ್ದೆಗೆ 3 ಸಾವಿರ ಅರ್ಜಿಗಳು

Date:

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ದೇಗುಲದಲ್ಲಿ ಅರ್ಚಕರ ಹುದ್ದೆ ನಿರ್ವಹಿಸಲು ಸುಮಾರು 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಖಾಲಿಯಿರುವ ಹುದ್ದೆಗಳನ್ನು ಪ್ರಕಟಿಸಲಾಗಿದೆ.

ಸಂದರ್ಶನಕ್ಕೆ ಅರ್ಹತೆಯ ಆಧಾರದ ಮೇಲೆ ಟ್ರಸ್ಟ್ 200 ಅಭ್ಯರ್ಥಿಗಳನ್ನು ಅಂತಿಮ ಪಟ್ಟಿ ಸಿದ್ಧಗೊಳಿಸಿದೆ. ದೇವಸ್ಥಾನದ ನಗರವಾದ ಕರಸೇವಕಪುರಂನಲ್ಲಿ ಸಂದರ್ಶನ ನಡೆಯುತ್ತಿದೆ.

ಮೂವರು ಸದಸ್ಯರ ಸಂದರ್ಶನ ಸಮಿತಿಯು ವೃಂದಾವನದ ಹಿಂದೂ ಧರ್ಮ ಪ್ರಚಾರಕ ಜಯಕಾಂತ್ ಮಿಶ್ರಾ ಮತ್ತು ಅಯೋಧ್ಯೆಯ ಇಬ್ಬರು ಮಹಂತರನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂದರ್ಶನದ ಸಮಯದಲ್ಲಿ ರಾಮ ಮಂದಿರ ದೇಗುಲದಲ್ಲಿ ನಡೆಯುವ ವಿವಿಧ ಪೂಜೆಗಳ ಕಾರ್ಯವಿಧಾನದ ಬಗ್ಗೆ ಅಭ್ಯರ್ಥಿಗಳಿಗೆ ಕಠಿಣ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಟ್ರಸ್ಟ್ ಅಂತಿಮವಾಗಿ 20 ಅಭ್ಯ ರ್ಥಿಗಳನ್ನು ಕೆಲಸಕ್ಕೆ ಆಯ್ಕೆ ಮಾಡುತ್ತದೆ. ಆರು ತಿಂಗಳ ವಸತಿ ತರಬೇತಿಯ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ರಾಮಜನ್ಮಭೂಮಿ ಸಂಕೀರ್ಣದಲ್ಲಿ ವಿವಿಧ ಹುದ್ದೆಗಳಲ್ಲಿ ಅರ್ಚಕರಾಗಿ ನೇಮಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ಏಜೆಂಟರಾಗಿರುವ ರಾಜ್ಯಪಾಲರುಗಳಿಗೆ ಸುಪ್ರೀಮ್ ಚಾವಟಿ!

ತರಬೇತಿಗೆ ಹಾಜರಾಗುವ ಆಯ್ಕೆಯಾಗದ ಹಾಗೂ ಅಂತಿಮ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಭವಿಷ್ಯದಲ್ಲಿ ರಚಿಸಲಾಗುವ ಅರ್ಚಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ರಾಮಮಂದಿರ ಟ್ರಸ್ಟ್‌ನ ಖಜಾಂಚಿ ಗೋವಿಂದ್ ದೇವ್ ಗಿರಿ ತಿಳಿಸಿದ್ದಾರೆ.

ಆಯ್ಕೆಯಾದ 20 ಅಭ್ಯರ್ಥಿಗಳು ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳ ಕಚೇರಿಗಳನ್ನು ಹೊಂದಿರುವ ಕರಸೇವಕಪುರಂನಲ್ಲಿ ಆರು ತಿಂಗಳ ತರಬೇತಿಯನ್ನು ಪಡೆಯಲಿದ್ದಾರೆ. ಉನ್ನತ ದರ್ಶಕರು ಸಿದ್ಧಪಡಿಸಿದ ಧಾರ್ಮಿಕ ಪಠ್ಯಕ್ರಮದ ಆಧಾರದ ಮೇಲೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಜೊತೆಗೆ ಮಾಸಿಕ ಭತ್ಯೆಯ ರೂಪದಲ್ಲಿ 2,000 ರೂ ನೀಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...