ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರ ಸಾವು; ಹಲವರು ಸಿಲುಕಿರುವ ಶಂಕೆ

Date:

ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ದಯಾಳ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಅವರಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಹೂತು ಹೋಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಎನ್‌ಡಿಆರ್‌ಎಫ್‌, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ 18 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ ಎಂದು ಸ್ಥಳೀಯ ಡಿಸಿಪಿ ಸಂದೀಪ್‌ ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿರುವ ವರದಿಗಳಾಗಿವೆ.

ಕಳೆದ ವಾರ ಇದೇ ರೀತಿಯ ಘಟನೆಯಲ್ಲಿ, ಮಧು ವಿಹಾರ್ ಪೊಲೀಸ್ ಠಾಣೆ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಗೋಡೆ ಧೂಳಿನ ಬಿರುಗಾಳಿಯ ಸಮಯದಲ್ಲಿ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಗೋಡೆಯು ನಿರ್ಮಾಣ ಹಂತದಲ್ಲಿರುವ ಆರು ಅಂತಸ್ತಿನ ಕಟ್ಟಡಕ್ಕೆ ಸೇರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...