ಉಕ್ರೇನ್ ಯುದ್ಧ | ಬಲವಂತವಾಗಿ ರಷ್ಯಾ ಸೇನೆಗೆ ನೇಮಕ; ರಾಜ್ಯದ ಮೂವರು ಸೇರಿ ನಾಲ್ವರು ಭಾರತೀಯರು ವಾಪಸ್

Date:

ಬಲವಂತವಾಗಿ ರಷ್ಯಾ ಸೇನೆಗೆ ನೇಮಕಗೊಂಡು ಯುದ್ಧ ಪೀಡಿತ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ತನ್ನನ್ನು ರಕ್ಷಿಸುವಂತೆ ತೆಲಂಗಾಣ ಮೂಲದ ಮೊಹಮ್ಮದ್ ಸೂಫಿಯಾನ್ ಮನವಿ ಮಾಡಿದ ಸುಮಾರು ಏಳು ತಿಂಗಳ ನಂತರ ರಕ್ಷಣೆ ಮಾಡಲಾಗಿದೆ. ಶುಕ್ರವಾರ ಸೂಫಿಯಾನ್ ಜೊತೆಗೆ ನಮ್ಮ ಕರ್ನಾಟಕದ ಮೂವರೂ ಭಾರತಕ್ಕೆ ವಾಪಸ್ ಬಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಕನಿಷ್ಠ 60 ಭಾರತೀಯ ಯುವಕರು ಉದ್ಯೋಗ ವಂಚನೆಗೆ ಬಲಿಯಾಗಿದ್ದು, ಇನ್ನೂ ಹಲವಾರು ಮಂದಿ ವಿದೇಶಿ ನೆಲದಲ್ಲಿ ನರಳುತ್ತಿದ್ದಾರೆ. ರಷ್ಯಾದಲ್ಲಿ ಭದ್ರತಾ ಸಿಬ್ಬಂದಿ ಅಥವಾ ಸಹಾಯಕ ಕೆಲಸಕ್ಕಾಗಿ 2023ರ ಡಿಸೆಂಬರ್‌ನಲ್ಲಿ ಭಾರತದಿಂದ ಹಲವಾರು ಯುವಕರು ರಷ್ಯಾಕ್ಕೆ ಹೋಗಿದ್ದಾರೆ. ಆದರೆ ಅಲ್ಲಿ ಬಲವಂತವಾಗಿ ರಷ್ಯಾ ಸೇನೆಗೆ ಸೇರಿಸಿ ಉಕ್ರೇನ್ ವಿರುದ್ಧ ಯುದ್ಧಕ್ಕೆ ಕಳುಹಿಸಲಾಗುತ್ತಿದೆ ಎಂದು ವರದಿಯಾಗಿದೆ.

“ನಮ್ಮನ್ನು ಗುಲಾಮರಂತೆ ನಡೆಸಿಕೊಳ್ಳಲಾಗಿದೆ. ನಮ್ಮನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಎಬ್ಬಿಸಲಾಗುತ್ತಿತ್ತು. 15 ಗಂಟೆಗಳ ಕಾಲ ನಿರಂತರವಾಗಿ ಕೆಲಸ ಮಾಡಿಸಲಾಗುತ್ತಿತ್ತು. ಸರಿಯಾಗಿ ವಿಶ್ರಾಂತಿ ಅಥವಾ ನಿದ್ರೆ ಇರಲಿಲ್ಲ. ಪರಿಸ್ಥಿತಿ ಅಮಾನವೀಯವಾಗಿತ್ತು” ಎಂದು ನಾರಾಯಣಪೇಟೆಯ ಸೂಫಿಯಾನ್ ಹೈದರಾಬಾದ್‌ಗೆ ಬಂದಿಳಿದ ಬಳಿಕ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

“ಸ್ವಲ್ಪ ಆಹಾರ ನೀಡಲಾಗುತ್ತಿತ್ತು. ನಾವು ಆಯಾಸವಾದಂತೆ ಕಂಡರೆ ಇನ್ನಷ್ಟು ಕೆಲಸನವನು ಮಾಡಿಸುತ್ತಿದ್ದರು. ನಮ್ಮ ಮೇಲೆ ಗುಂಡು ಹಾರಿಸಲಾಗುತ್ತಿತ್ತು. ಪ್ರೊಜೆಕ್ಟ್ ಎಂದರೆ ಕೆಲಸವಾಗಿರಲಿಲ್ಲ. ಕಂದಕಗಳನ್ನು ಅಗೆಯುವುದು, ರೈಫಲ್‌ ಹಾರಿಸುವುದು, ಹ್ಯಾಂಡ್ ಗ್ರೆನೇಡ್‌ ಮತ್ತು ಇತರ ಸ್ಫೋಟಕಗಳನ್ನು ಹಾರಿಸುವುದು, ಎಕೆ -12 ಮತ್ತು ಎಕೆ -74 ಹಾರಿಸುವುದು ಹೇಗೆಂದು ತರಬೇತಿ ನೀಡಲಾಗಿತ್ತು. ಜೊತೆಗೆ ಪ್ರಪಂಚದ ಇತರ ಭಾಗಗಳಿಗೆ ಯಾವುದೇ ಸಂಪರ್ಕವಿಲ್ಲದೆ ಬದುಕಬೇಕಾಗಿತ್ತು. ಇದು ಅತೀ ಕಠಿಣವಾಗಿತ್ತು. ಕುಟುಂಬಸ್ಥರೊಂದಿಗೂ ಮಾತನಾಡಲು ಅವಕಾಶ ಇರಲಿಲ್ಲ” ಎಂದು ಹೇಳಿಕೊಂಡಿದ್ದಾರೆ.

ರಷ್ಯಾ

“ನಮ್ಮ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತರಬೇತಿಯ ಸಮಯದಲ್ಲಿ ಕುಟುಂಬದೊಂದಿಗೆ ಮಾತನಾಡಲು ಅವಕಾಶವಿರಲಿಲ್ಲ” ಎಂದು ಕರ್ನಾಟಕದ ಅಬ್ದುಲ್ ನಯೀಮ್ ಹೇಳಿದ್ದಾರೆ. ಕರ್ನಾಟಕದ ಕಲಬುರಗಿ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, “ಪ್ರತಿದಿನ ಇದು ನಮ್ಮ ಕೊನೆಯ ದಿನವೆಂದು ನಾವು ಭಾವಿಸುತ್ತಿದ್ದೆವು” ಎಂದು ಕಣ್ಣೀರಿಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...