ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಮೆರವಣಿಗೆ, ನೆಟ್ಟಿಗರ ಆಕ್ರೋಶ

Date:

25 ಕೆಜಿ ಬಟಾಣಿ ಕದ್ದ ಆರೋಪದ ಮೇಲೆ ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಬಳಿಕ ಊರಿನಲ್ಲಿ ಮೆರವಣಿಗೆ ಮಾಡಿದ ಘಟನೆ ಶನಿವಾರ ಬಿಹಾರದ ಮುಂಗೇರ್‌ನ ಜೋವಾಬಹಿಯಾರ್ ಗ್ರಾಮದಲ್ಲಿ ನಡೆದಿದೆ. ಸದ್ಯ 20 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಬಾಲಕರು ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ. ಗುಂಪೊಂದು ಬಾಲಕರ ಕೈಕಟ್ಟಿ ಹಾಕಿ ಅವರನ್ನು ಹಳ್ಳಿಯ ಮೂಲಕ ಮೆರವಣಿಗೆ ಮಾಡಿದೆ. ಓರ್ವ ಬಾಲಕ ಕಳ್ಳತನವನ್ನು ಒಪ್ಪಿಕೊಂಡಿದ್ದು, ಇತರ ಮೂವರು ಆರೋಪಿಗಳೆಂದು ಹೇಳಿದ್ದಾನೆ. ಇದಾದ ಬಳಿಕ ಗುಂಪೊಂದು ನಾಲ್ವರಿಗೂ ಥಳಿಸಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? 500 ರೂ. ಕದ್ದ ಆರೋಪ; ಮಗನನ್ನೇ ಹೊಡೆದು ಕೊಂದ ತಂದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈ ವೇಳೆ ನಾಲ್ವರು ಬಾಲಕರಲ್ಲಿ ಯಾವುದೇ ಬಾಲಕರ ಕುಟುಂಬಸ್ಥರಾಗಲಿ ಅಥವಾ ಗ್ರಾಮಸ್ಥರಾಗಲಿ ಮಧ್ಯಪ್ರವೇಶಿಸಿಲ್ಲ. ಇನ್ನು ಕೆಲವು ಸ್ಥಳೀಯ ಅಂಗಡಿಯವರು ಮತ್ತು ನಿವಾಸಿಗಳು ಈ ಬಾಲಕರ ಮೇಲೆ ಬೇರೆ ಕಳ್ಳತನದ ಆರೋಪವನ್ನೂ ಹೊರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ಕಳ್ಳತನವನ್ನು ತಡೆಯಬೇಕಾದರೆ ನಾವು ಈ ರೀತಿ ಕ್ರಮಕೈಗೊಳ್ಳುವುದು ಅತಿ ಮುಖ್ಯ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಸೈಯದ್ ಇಮ್ರಾನ್ ಮಸೂದ್, “ಅಧಿಕಾರಿಗಳಿಗೆ ವಿಡಿಯೋ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...