ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 40 ಮಂದಿ ಸಾವು, 200ಕ್ಕೂ ಹೆಚ್ಚು ನಾಪತ್ತೆ

Date:

ಜಮ್ಮು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯ ಚಸೋತಿ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್‌ ಪ್ರವಾಹದಲ್ಲಿ 40 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹದಿಂದಾಗಿ 120ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, 38 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಮೃತರಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಇಬ್ಬರು ಸಿಬ್ಬಂದಿ ಸೇರಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.

ಚಸೋತಿ ಗ್ರಾಮವು ಕಿಶ್ತ್‌ವಾಡದಿಂದ ಸುಮಾರು 90 ಕಿ.ಮೀ ದೂರದಲ್ಲಿದ್ದು, 9,500 ಅಡಿ ಎತ್ತರದಲ್ಲಿರುವ ಈ ಪ್ರದೇಶವು ಮಚೈಲ್ ಮಾತಾ ದೇವಾಲಯಕ್ಕೆ ತೆರಳುವ ಯಾತ್ರಿಗರಿಗೆ ಪ್ರಮುಖ ಕೇಂದ್ರವಾಗಿದೆ. ದೇವಾಲಯಕ್ಕೆ 8.5 ಕಿ.ಮೀ. ಪಾದಯಾತ್ರೆಯು ಚಸೋತಿಯಿಂದ ಆರಂಭವಾಗುತ್ತದೆ. ಘಟನೆಯ ಸಮಯದಲ್ಲಿ ದೇವಾಲಯಕ್ಕೆ ತೆರಳಲು ದೊಡ್ಡ ಸಂಖ್ಯೆಯ ಭಕ್ತರು ಗ್ರಾಮದಲ್ಲಿ ಜಮಾಯಿಸಿದ್ದರು. ಈ ದುರಂತದಿಂದಾಗಿ ವಾರ್ಷಿಕ ಮಚೈಲ್ ಮಾತಾ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಯ ಎರಡು ತಂಡಗಳು ಉಧಂಪುರದಿಂದ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿವೆ ಎಂದು ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಶರ್ಮಾ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವು ತೀವ್ರಗತಿಯಲ್ಲಿ ನಡೆಯುತ್ತಿದ್ದು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಂತ್ರಸ್ತರಿಗೆ ಸಹಾಯ ಮತ್ತು ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...