40 ಗಂಟೆ ಟ್ರಾಫಿಕ್ – ಮೂವರು ಸಾವು ಪ್ರಕರಣ: ‘ಇಷ್ಟು ಬೇಗ ಯಾಕೆ ಹೊರಟಿರಿ’ ಎಂದ NHAI ವಕೀಲ

Date:

ಮಧ್ಯಪ್ರದೇಶದ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ 40 ಗಂಟೆಗಳ ಸುದೀರ್ಘ ‘ಟ್ರಾಫಿಕ್ ಜಾಮ್‌’ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿ ‘ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ’ (NHAI) ಪರವಾಗಿ ವಾದ ಮಂಡಿಸಿರುವ ವಕೀಲರು ಅರ್ಜಿದಾರರನ್ನೇ ‘ನೀವು ಯಾಕೆ ಇಷ್ಟು ಬೇಗ ಮನೆಯಿಂದ ಹೊರಟಿರಿ’ ಎಂದು ಪ್ರಶ್ನಿಸಿ, ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಶುಕ್ರವಾರ ಸಂಭವಿಸಿದ 40 ಗಂಟೆಗಳ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಡಿದದ ವಕೀಲ ಆನಂದ್ ಅಧಿಕಾರಿ ಅವರು ನ್ಯಾಯಾಲಯದಲ್ಲಿ ಪಿಐಎಲ್‌ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಇಂದೋರ್ ನ್ಯಾಯಾಲಯದ ನ್ಯಾಯಮೂರ್ತಿ ವಿವೇಕ್ ರೂಸಿಯಾ ಮತ್ತು ಬಿನೋದ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡಿದ್ದ ನ್ಯಾಯಪೀಠ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, ವಾದ ಮಂಡಿಸಿದ NHAI ವಕೀಲರು, “ಕೆಲಸ ಇಲ್ಲದೆ ಮನೆಯಿಂದ ಯಾಕೆ ಹೊರಗೆ ಬರುತ್ತೀರಿ. ಯಾಕೆ ಅಷ್ಟು ಬೇಗ ಮನಿಯಿಂದ ಹೊರುತ್ತೀರಿ” ಎಂದು ಹೇಳಿದ್ದು, ನ್ಯಾಯಾಲಯದಲ್ಲಿ ನೆರೆದಿದ್ದವರನ್ನು ನಿಬ್ಬೆರಗುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪ್ರಶ್ನೆಯನ್ನು ಖಂಡಿಸಿದ ಅರ್ಜಿದಾರರ ಪರ ವಕೀಲ ಗಿರೀಶ್ ಪಟವರ್ಧನ್, “NHAI ಪರ ವಕೀಲರು ನ್ಯಾಯಾಲಯದಲ್ಲಿ ನಿಂತು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಸಾರ್ವಜನಿಕರು ಮನೆಯಿಂದ ಹೊರ ಬರಲು ಸುರಕ್ಷತೆಯೇ ಇಲ್ಲ. ರಸ್ತೆಗಳು ಸುರಕ್ಷಿತವಾಗಿಲ್ಲ ಎಂಬುದನ್ನು ಅವರು ಧ್ವನಿಸುತ್ತಿದ್ದಾರೆ. ಇಂತಹ ಆಕ್ಷೇಪಾರ್ಹ ಹೇಳಿಕೆಗಳನ್ನು ನ್ಯಾಯಾಲಯವು ಮಾನ್ಯ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಇದೇ ಹೆದ್ದಾರಿಯ ತಿರುವು ರಸ್ತೆ ನಿರ್ಮಾಣ ಕಾಮಗಾರಿಯನ್ನು 4 ವಾರಗಳೊಳಗೆ ಪೂರ್ಣಗೊಳಿಸಿ, ಸಂಚಾರಕ್ಕೆ ತೆರೆಯಬೇಕು ಎಂದು ನ್ಯಾಯಾಲಯವು ನೀಡಿದ್ದ ಆದೇಶವನ್ನೂ ವಕೀಲರು ಕೋರ್ಟ್‌ ಗಮನಕ್ಕೆ ತಂದರು.ನ್ಯಾಯಾಲಯದ ಆದೇಶದ ಹೊರತಾಗಿಯೂ ಕಾಮಗಾರಿ ಈವರೆಗೆ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಅರ್ಜಿದಾರರ ಪರ ವಾಕೀಲರ ವಾದ ಆಲಿಸಿದ ನ್ಯಾಯಾಲಯವು, “ಇಂತಹ ವಿಳಂಬಗಳ ಹಿಂದಿರುವ ತರ್ಕವೇನು” ಎಂದು ಎನ್‌ಎಚ್‌ಎಐಅನ್ನು ಪ್ರಶ್ನಿಸಿತು. ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು. ಪ್ರತಿವಾದಿಗಳು ತಮ್ಮ ಉತ್ತರವನ್ನು ಲಿಖಿತವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ಸೂಚಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...