40% ಗಿಗ್ ಕಾರ್ಮಿಕರ ಮಾಸಿಕ ದುಡಿಮೆ 15,000 ರೂ.ಗಿಂತ ಕಡಿಮೆ: ಆರ್ಥಿಕ ಸಮೀಕ್ಷೆ

Date:

ಭಾರತದಲ್ಲಿನ ಗಿಗ್ ಕಾರ್ಮಿಕರ ಪೈಕಿ ಸುಮಾರು 40% ಕಾರ್ಮಿಕರು ತಿಂಗಳಿಗೆ 15,000 ರೂ.ಕ್ಕಿಂತಲೂ ಕಡಿಮೆ ಗಳಿಸುತ್ತಾರೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಅವರಿಗೆ ನ್ಯಾಯಯುತ ವೇತನವನ್ನು ಖಚಿತಪಡಿಸಲು ಪ್ರಮುಖ ನೀತಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದೆ. ಅವರು ‘ಆರ್ಡರ್‌’ಗಳಿಗಾಗಿ ಕಾಯುವ ಸಮಯಕ್ಕೂ ಪರಿಹಾರ ಒದಗಿಸಲು ಪ್ರತಿ ಗಂಟೆಗೆ ಇಂತಿಷ್ಟು ಮೊತ್ತವನ್ನು ನಿಗದಿ ಮಾಡಬೇಕೆಂದು ಸೂಚಿಸಿದೆ.

ಗುರುವಾರ, ಸಂಸತ್ತಿನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ದುರ್ಬಲ ಗಿಗ್-ಆರ್ಥಿಕ ನೀತಿಗಳು, ಕೌಶಲ್ಯ ಹೊಂದಾಣಿಕೆಯ ಕೊರತೆ ಅಥವಾ ಸುರಕ್ಷತಾ ಜಾಲದ ಕೊರತೆಯಿಂದಾಗಿ ಗಿಗ್‌ ಕಾರ್ಮಿಕರು ಒತ್ತಾಯದಿಂದ ಕೆಲಸ ಮಾಡುವ ವಾತಾವರಣವಿದೆ. ಗಿಗ್‌ ವಲಯವು ವೇಗವಾಗಿ ವಿಸ್ತರಿಸುತ್ತಿರುವಾಗಲೂ ಆದಾಯದ ಏರಿಳಿತ ಕಾಡುತ್ತಿದೆ. ಅನೇಕ ಕಾರ್ಮಿಕರು ‘ಥಿನ್-ಫೈಲ್’ ಸಾಲಗಳನ್ನು ಅವಲಂಬಿಸಿದ್ದಾರೆ ಎಂದು ಸಮೀಕ್ಷೆ ವಿವರಿಸಿದೆ.

ಕೆಲಸದ ಹಂಚಿಕೆ, ವೇತನ ಮತ್ತು ಕಾರ್ಯಕ್ಷಮತೆ ಮೇಲ್ವಿಚಾರಣೆಯನ್ನು ನಿಯಂತ್ರಿಸುವ ಪ್ಲಾಟ್‌ಫಾರ್ಮ್ ಅಲ್ಗಾರಿದಮ್‌ಗಳ ಕುರಿತು ಸಮೀಕ್ಷೆಯು ಕಳವಳ ವ್ಯಕ್ತಪಡಿಸಿದೆ. ಪಕ್ಷಪಾತ ಮತ್ತು ಕಾರ್ಮಿಕರ ರಕ್ಷಣೆಯಲ್ಲಿ ಸಮಸ್ಯೆಗಳನ್ನು ಗುರುತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಗಿಗ್ ಕಾರ್ಮಿಕರ ಸಂಖ್ಯೆಯು 2025ರ ಆರ್ಥಿಕ ವರ್ಷದಲ್ಲಿ 55% ರಷ್ಟು ಏರಿಕೆಯಾಗಿದ್ದು, 1.2 ಕೋಟಿಗೆ ತಲುಪಿದೆ. ಇದು ಒಟ್ಟು ಉದ್ಯೋಗದ 2% ಕ್ಕಿಂತ ಹೆಚ್ಚಿದೆ. ಕೃಷಿಯೇತರ ಗಿಗ್ ಉದ್ಯೋಗಗಳು 2029-30ರ ವೇಳೆಗೆ ಕಾರ್ಯಪಡೆಯ 6.7% ತಲುಪುವ ನಿರೀಕ್ಷೆಯಿದೆ. ಇದು GDPಗೆ 2.35 ಲಕ್ಷ ಕೋಟಿ ರೂ. ಕೊಡುಗೆ ನೀಡುತ್ತದೆ ಎಂದು ಸಮೀಕ್ಷೆ ವಿವರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...