ಭೋಪಾಲ್ ಅನಿಲ ದುರಂತ ಘಟಿಸಿದ 40 ವರ್ಷಗಳ ನಂತರ ತ್ಯಾಜ್ಯ ವಿಲೇವಾರಿ

Date:

ದೇಶವನ್ನೇ ಬೆಚ್ಚಿ ಬೀಳಿಸಿದ್ದ 1984ರ ಮಧ್ಯ ಪ್ರದೇಶದ ಭೋಪಾಲ್ ಅನಿಲ ದುರಂತ ನಡೆದ 40 ವರ್ಷಗಳ ಬಳಿಕ ಯೂನಿಯನ್ ಕಾರ್ಬೈಡ್ ಕಾರ್ಖಾನೆಯ ಸ್ಥಳದಲ್ಲಿ ಸಂಗ್ರಹವಾಗಿರುವ ಸುಮಾರು 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸ್ಥಳಾಂತರಗೊಳಿಸಲಾಯಿತು.

1984 ರಲ್ಲಿ ಸಂಭವಿಸಿದ ಭೀಕರ ಅನಿಲ ದುರಂತವು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿತ್ತು. ಅನಿಲ ಸೋರಿಕೆಯ ಪರಿಣಾಮ ಸುಮಾರು 6 ಲಕ್ಷ ಮಂದಿ ನಾನಾ ರೀತಿಯ ಕಾಯಿಲೆಗೆ ತುತ್ತಾಗಿದ್ದರು. ಅದೇ ಸಮಯದಲ್ಲಿ, 40 ವರ್ಷಗಳಿಂದ ಯೂನಿಯನ್ ಕಾರ್ಬೈಡ್ ಮತ್ತು ಡೌ ಕೆಮಿಕಲ್ ಕಾರ್ಖಾನೆಗಳಲ್ಲಿ ಬಿದ್ದಿರುವ ರಾಸಾನಿಕ ತ್ಯಾಜ್ಯವು ಭೋಪಾಲ್‌ನ ಹವಾಮಾನವನ್ನೂ ಕಲುಷಿತಗೊಳಿಸುತ್ತಿತ್ತು. ಪರಿಣಾಮ ಕಾರ್ಖಾನೆಯ ಸುತ್ತಲಿನ ಮಣ್ಣು, ಅಂತರ್ಜಲ ಕೂಡ ಕಲುಷಿತವಾಗತೊಡಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ಡಿಸೆಂಬರ್ 3 ರಂದು, ಮಧ್ಯಪ್ರದೇಶ ಹೈಕೋರ್ಟ್ ವಿಷಕಾರಿ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಾಲ್ಕು ವಾರಗಳ ಗಡುವನ್ನು ನೀಡಿತು. ಅಲ್ಲದೆ ಡಿಸೆಂಬರ್ 5 ರಂದು ತ್ಯಾಜ್ಯ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರವನ್ನೂ ತರಾಟೆಗೆ ತೆಗೆದುಕೊಂಡಿತ್ತು. ಘಟನೆ ನಡೆದು ನಲ್ವತ್ತು ವರ್ಷಗಳು ಕಳೆದರೂ ಇನ್ನು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡದಿರುವುದು ದುರಂತ ಈ ವಿಷಕಾರಿ ತ್ಯಾಜ್ಯಗಳು ಭೂಮಿ ಮೇಲೆ ಇದ್ದರೆ ಇನ್ನೂ ಹೆಚ್ಚಿನ ಅನಾಹುತಗಳು ಸಂಭವಿಸಬಹುದು ಎಂದು ಹೈಕೋರ್ಟ್ ಸರಕಾರಕ್ಕೆ ಛೀಮಾರಿ ಹಾಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ಬಳಿಕ ವಿಚಾರ ಹೈಕೋರ್ಟ್‌ನ ಆದೇಶದ ಮೇರೆಗೆ ಸುಮಾರು 40 ವರ್ಷಗಳ ಬಳಿಕ ಈ ತ್ಯಾಜ್ಯವನ್ನು ಭೋಪಾಲ್‌ನಿಂದ 250 ಕಿ.ಮೀ. ದೂರವಿರುವ ಕೈಗಾರಿಕಾ ಪ್ರದೇಶವಾದ ದಾರ್ ಜಿಲ್ಲೆಯ ಪೀತಂಪುರಕ್ಕೆ ಸುಮಾರು ಹನ್ನೆರಡು ಟ್ರಕ್‌ಗಳ ಮೂಲಕ ಬುಧವಾರ ಸಾಗಿಸಲಾಗಿದೆ.

ಸುಮಾರು 40 ವರ್ಷಗಳಿಂದ ಕೈಗಾರಿಕಾ ಪ್ರದೇಶದಲ್ಲಿ ಬಿದ್ದಿದ್ದ 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜಗಳನ್ನು ಸುರಕ್ಷತಾ ಮಾನದಂಡಗಳನ್ನು(ಪಿಪಿಇ ಕಿಟ್) ಅನುಸರಿಸುವ ಮೂಲಕ ಸುಮಾರು 200 ಕಾರ್ಮಿಕರನ್ನು ಬಳಸಿಕೊಂಡು ತ್ಯಾಜ್ಯವನ್ನು ಸಂಗ್ರಹ ಮಾಡಲಾಗಿದ್ದು ಅದಕ್ಕಾಗಿ ಸುಮಾರು ಹನ್ನೆರಡು ಕಂಟೈನರ್‌ಗಳನ್ನು ಬಳಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆಯನ್ನು ಒದಗಿಸುವ ಮೂಲಕ ಬುಧವಾರ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಪೀತಂಪುರಕ್ಕೆ ಕೊಂಡೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...