ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

Date:

2018ರಿಂದ 5 ವರ್ಷಗಳಲ್ಲಿ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿ ಸ್ವಚ್ಛಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಕಳವಳಕಾರಿ ಮಾಹಿತಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ವರದಿ ನೀಡಿದೆ.

ಲೋಕಸಭೆಯಲ್ಲಿ ಟಿಎಂಸಿ ಸದಸ್ಯೆ ಅಪರೂಪ ಪೊದ್ದಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ, 2018 ರಿಂದ 2023ರ ನವೆಂಬರ್ 20ರ ನಡುವೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 443 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

2018ರಲ್ಲಿ 76, 2019ರಲ್ಲಿ 133, 2020ರಲ್ಲಿ 35, 2021ರಲ್ಲಿ 66, 2022ರಲ್ಲಿ 84 ಮತ್ತು ಈ ವರ್ಷದ ನವೆಂಬರ್‌ 20ರ ತನಕ 49 ಮಂದಿ ಮೃತಪಟ್ಟಿದ್ದಾರೆ. ಈ ವರ್ಷ ರಾಜಸ್ಥಾನದಲ್ಲಿ 10, ಗುಜರಾತ್‌ನಲ್ಲಿ 9 ಮತ್ತು ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ 7 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಉಲ್ಲೇಖಿಸಿ ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅಠಾವಳೆ, ”ನೀತಿ ಆಯೋಗದ ಆದೇಶದ ಮೇರೆಗೆ 2018ರಲ್ಲಿ ನಡೆಸಿದ ಮ್ಯಾನ್ಯುವಲ್ ಸ್ಕಾವೆಂಜರ್‌ಗಳ ರಾಷ್ಟ್ರೀಯ ಸಮೀಕ್ಷೆ ವೇಳೆ 44,217 ಮ್ಯಾನ್ಯುವಲ್ ಸ್ಕಾವೆಂಜರ್‌ಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸರ್ಕಾರವು ಮತ್ತೊಂದು ಸಮೀಕ್ಷೆಯನ್ನು ನಡೆಸಲಿದೆಯೇ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ʼʼಸುಪ್ರೀಂ ಕೋರ್ಟ್ ಮ್ಯಾನ್ಯುವಲ್ ಸ್ಕಾವೆಂಜರ್‌ಗಳ ರಾಷ್ಟ್ರವ್ಯಾಪಿ ಸಮೀಕ್ಷೆಗೆ ನಿರ್ದೇಶನ ನೀಡಿದೆ. ಅದರಂತೆ ಸಮೀಕ್ಷೆ ನಡೆಸಲಿದ್ದೇವೆʼʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮ್ಯಾನ್ಯುವಲ್ ಸ್ಕಾವೆಂಜರ್ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಪ್ರಕಾರ ಮ್ಯಾನ್ಯುವಲ್ ಸ್ಕಾವೆಂಜಿಂಗ್ ಅನ್ನು ನಿಷೇಧಿಸಲಾಗಿದೆ. ಅಂದರೆ ಕೈಯಿಂದ ಮಲ ಬಾಚುವ ಕೆಲಸವನ್ನು ಮಾಡುವಂತಿಲ್ಲ. ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದು ಕೂಡ ಈ ನಿಷೇಧಿತ ಅಭ್ಯಾಸದ ಒಂದು ಭಾಗ ಎಂದು ತಜ್ಞರು ಹೇಳುತ್ತಾರೆ.

“ದೇಶದ 766 ಜಿಲ್ಲೆಗಳ ಪೈಕಿ 714 ಜಿಲ್ಲೆಗಳು ಈ ವರ್ಷದ ನವೆಂಬರ್‌ 29ರಂದು ತಮ್ಮನ್ನು ಮ್ಯಾನ್ಯುವಲ್ ಸ್ಕಾವೆಂಜಿಂಗ್ ಮುಕ್ತವೆಂದು ಘೋಷಿಸಿಕೊಂಡಿವೆʼʼ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರವು ಮ್ಯಾನ್‌ಹೋಲ್‌ ಸ್ವಚ್ಛಗೊಳಿಸಲು ರೋಬೋಟ್‌ಗಳನ್ನು ನಿಯೋಜಿಸಿದೆಯೇ ಎಂದು ಕೇಳಿದಾಗ, ಉತ್ತರಿಸಿದ ಸಚಿವರು, ʼʼಅಂತಹ ರೋಬೋಟ್‌ಗಳ ಸಂಖ್ಯೆ ಅಥವಾ ಅವುಗಳನ್ನು ಎಲ್ಲಿ ಬಳಸಲಾಗುತ್ತಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲʼʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...