48 ಗಂಟೆಗಳ ಪೊಲೀಸ್‌ ಕಾರ್ಯಾಚರಣೆ; 280 ದರೋಡೆಕೋರರ ಬಂಧನ

Date:

ದೆಹಲಿ ಪೊಲೀಸರು ‘ಆಪರೇಷನ್ ಗ್ಯಾಂಗ್ ಬಸ್ಟ್-2026’ಅನ್ನು ಪ್ರಾರಂಭಿಸಿದ್ದಾರೆ. ಗ್ಯಾಂಗ್‌ಸ್ಟರ್‌ಗಳು ಮತ್ತು ದರೋಡೆಕೋರರ ವಿರುದ್ಧದ ಪ್ರಮುಖ ಕಾರ್ಯಾಚರಣೆ ಇದಾಗಿದೆ. 48 ಗಂಟೆಗಳ ಶೋಧದಲ್ಲಿ 280 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಗಾಗಿ 9,000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಇತರ ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಕಳೆದ 48 ಗಂಟೆಗಳಲ್ಲಿಯೇ ಪ್ರಮುಖ ಮತ್ತು ಸಣ್ಣ ಗ್ಯಾಂಗ್‌ಗಳಿಗೆ ಸೇರಿದ 280 ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ 12 ದಿನಗಳಲ್ಲಿ ಒಟ್ಟು 854 ಆರೋಪಿಗಳನ್ನು ಬಂಧಿಸಲಾಗಿದೆ. 6,400ಕ್ಕೂ ಹೆಚ್ಚು ಶಂಕಿತರನ್ನು ಪರಿಶೀಲನೆ ಮತ್ತು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ (ಸಿಪಿ) ವಿಶೇಷ ಕೋಶ ಪ್ರಮೋದ್ ಕುಶ್ವಾಹ ಹೇಳಿದ್ದಾರೆ.

“ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆ ಮತ್ತು ಶಸ್ತ್ರಾಸ್ತ್ರ ಅಪರಾಧಗಳಲ್ಲಿ ಆರೋಪಿಗಳಾಗಿರುವ ಗ್ಯಾಂಗ್‌ಸ್ಟರ್‌ಗಳು, ಅವರ ಸಹಚರರು ಹಾಗೂ ಸಂಘಟಿತ ಅಪರಾಧದ ಕೃತ್ಯದಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ. 4,299 ಅಡಗುತಾಣಗಳ ಮೇಲೆ ಪೊಲೀಸ್‌ ತಂಡಗಳು ದಾಳಿ ನಡೆಸಿವೆ. ಆರೋಪಿಗಳನ್ನು ಬಂಧಿಸಿವೆ. ಅಲ್ಲದೆ, ಕಾನೂನಿನ ವಿವಿಧ ವಿಭಾಗಗಳ ಅಡಿಯಲ್ಲಿ 690 ಹೊಸ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿವೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಾಚರಣೆಯಲ್ಲಿ ಪೊಲೀಸರು ಸುಮಾರು 300 ಅಕ್ರಮ ಶಸ್ತ್ರಾಸ್ತ್ರಗಳು, 130 ಮದ್ದುಗುಂಡುಗಳು ಹಾಗೂ ಸುಮಾರು 25 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...