ದೆಹಲಿ | ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ್ದ ಐವರು ಆರೋಪಿಗಳ ಬಂಧನ

Date:

  • ದರೋಡೆ ಸಂಬಂಧ ದೆಹಲಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು
  • ಪ್ರಗತಿ ಮೈದಾನದ ಸುರಂಗ ರಸ್ತೆಯಲ್ಲಿ ಕ್ಯಾಬ್‌ ಅಡ್ಡಗಟ್ಟಿ ಹಣ ದೋಚಿದ್ದ ಕಳ್ಳರು

ದೆಹಲಿ ಪ್ರಗತಿ ಮೈದಾನದ ಬಳಿಯ ಸುರಂಗ ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಎರಡು ಬೈಕ್‌ನಲ್ಲಿ ಕ್ಯಾಬ್‌ ಹಿಂಬಾಲಿಸಿಕೊಂಡು ಬಂದು ಕಾರು ಅಡ್ಡಗಟ್ಟಿ ಗನ್‌ ತೋರಿಸಿ ಹಣ ದೋಚಿದ್ದ ಐವರು ದರೋಡೆಕೋರರನ್ನು ಪೊಲೀಸರು ಮಂಗಳವಾರ (ಜೂನ್‌ 27) ಬಂಧಿಸಿದ್ದಾರೆ.

ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ಅಳವಡಿಸಲಾಗಿರುವ 350ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ದರೋಡೆ ನಡೆಸಿದ ನಂತರ ದರೋಡೆಕೋರರು ಯಾವ ಮಾರ್ಗವನ್ನು ಅನುಸರಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿದೆ.

ಘಟನೆಯನ್ನು ಸಿಸಿಟಿವಿ ಕ್ಯಾಮೆರಾಗಳು ಸ್ಪಷ್ಟವಾಗಿ ಸೆರೆಹಿಡಿದಿದ್ದರೂ ಕಳ್ಳರು ಹೆಲ್ಮೆಟ್ ಧರಿಸಿದ್ದರಿಂದ ಬೈಕ್‌ಗಳಲ್ಲಿ ಬಂದ ದರೋಡೆಕೋರರ ಮುಖವನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ದರೋಡೆ ಘಟನೆಯ 22 ಸೆಕೆಂಡುಗಳ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ನಾಲ್ವರು ಎರಡು ಬೈಕ್ ಗಳಲ್ಲಿ ಕ್ಯಾಬ್‌ ಅನ್ನು ಹಿಂಬಾಲಿಸಿ ಅಡ್ಡಗಟ್ಟಿದರು. ಎರಡೂ ಬೈಕ್ ನಲ್ಲಿದ್ದ ಹಿಂಬದಿ ಸವಾರರಿಬ್ಬರು ಕೆಳಗಿಳಿದು ಒಬ್ಬರು ಚಾಲಕನ ಸೀಟಿನ ಕಡೆಗೆ ತೆರಳಿದರೆ, ಮತ್ತೊಬ್ಬ ಕಾರಿನ ಹಿಂದಿನ ಬಾಗಿಲಿನತ್ತ ತೆರಳಿದ್ದಾನೆ.

ಇಬ್ಬರೂ ಪಿಸ್ತೂಲ್ ತೋರಿಸಿ, ಏಜೆಂಟ್‌ ಬಳಿಯಿದ್ದ ಹಣವನ್ನು ದೋಚಿದರು. ನಂತರ ನಾಲ್ವರು ಬೈಕ್‌ಗಳಲ್ಲಿ ಹೊರಟರು. ಈ ವೇಳೆ ನಾಲ್ವರೂ ಹೆಲ್ಮೆಟ್ ಧರಿಸಿದ್ದರು. ದೆಹಲಿಯನ್ನು ಸರಾಯ್ ಕಾಲೆ ಖಾನ್ ಮತ್ತು ನೋಯ್ಡಾದೊಂದಿಗೆ ಸಂಪರ್ಕಿಸುವ 1.5 ಕಿಮೀ ಸುರಂಗ ರಸ್ತೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 397 (ದರೋಡೆ ಅಥವಾ ಡಕಾಯಿತಿ, ಸಾವು ಅಥವಾ ಘೋರವಾದ ಗಾಯ ಉಂಟುಮಾಡುವ ಪ್ರಯತ್ನ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್‌ಎಫ್‌ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

ಶನಿವಾರ ಮಧ್ಯಾಹ್ನ ಘಟನೆ ನಡೆದಿತ್ತು. ಚಾಂದಿನಿ ಚೌಕ್ ನ ಒಮಿಯಾ ಎಂಟರ್ಪ್ರೈಸಸ್‌ನ ಡೆಲಿವರಿ ಏಜೆಂಟ್ ಮತ್ತು ಆತನ ಸಹಚರರೊಬ್ಬರು ಹಣವನ್ನು ತಲುಪಿಸಲು ಕ್ಯಾಬ್‌ನಲ್ಲಿ ದೆಹಲಿ ನಗರದಿಂದ ಗುರುಗ್ರಾಮದ ಕಡೆಗೆ ತೆರಳುತ್ತಿದ್ದಾಗ ಬೈಕ್‌ಗಳಲ್ಲಿ ಬಂದ ದರೋಡೆಕೋರರು ಪ್ರಗತಿ ಮೈದಾನದ ಸುರಂಗ ರಸ್ತೆ ಬಳಿ ಕ್ಯಾಬ್ ಅಡ್ಡಗಟ್ಟಿ ಏಜೆಂಟ್‌ ಬಳಿ ಇದ್ದ ₹2 ಲಕ್ಷ ದೋಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಕಾರಿನಲ್ಲಿದ್ದ ವ್ಯಕ್ತಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...