ಪಂಜಾಬ್‌| ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಲಾಂಡಾನ ಐವರು ಸಹಾಯಕರ ಬಂಧನ

Date:

ಪಂಜಾಬ್‌ನ ಜಲಂಧರ್ ಪೊಲೀಸರು ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಲಾಂಡಾನ ಐವರು ಸಹಾಯಕರನ್ನು ಸುಲಿಗೆ, ಕೊಲೆ ಮತ್ತು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಿದ್ದಾರೆ. ಹಾಗೆಯೇ 15 ದಿನಗಳ ಕಾರ್ಯಾಚರಣೆಯಲ್ಲಿ ಐದು ವಿದೇಶಿ ವಿಸ್ತೂಲು ವಶಪಡಿಸಿಕೊಂಡಿದ್ದಾರೆ.

“ಕಮಿಷನರೇಟ್ ಪೊಲೀಸ್ ಜಲಂಧರ್ 15 ದಿನಗಳ ಕಾರ್ಯಾಚರಣೆಯಲ್ಲಿ ಕೆನಡಾ ಮೂಲದ ಲಖ್ಬೀರ್ ಲಾಂಡಾ ಗ್ಯಾಂಗ್‌ನ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ” ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಭಾನುವಾರ ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

“ಅವರು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮಾದಕವಸ್ತು ಕಳ್ಳಸಾಗಣೆ, ಕೊಲೆ, ಸುಲಿಗೆ, ಮತ್ತು ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಅನೇಕ ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. 5 ವಿದೇಶಿ ನಿರ್ಮಿತ ಪಿಸ್ತೂಲ್‌ಗಳು ವಶಕ್ಕೆ ಪಡೆಯಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ‘ನೀವು ಎಷ್ಟು ದೌರ್ಜನ್ಯ ಮಾಡಿದರೂ ಅರವಿಂದ್ ಕೇಜ್ರಿವಾಲ್ ತಲೆಬಾಗಲ್ಲ’ ಎಂದ ಪಂಜಾಬ್ ಸಿಎಂ

“ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿರ್ದೇಶನದಂತೆ ರಾಜ್ಯದಲ್ಲಿ ಸಂಘಟಿತ ಅಪರಾಧಗಳನ್ನು ನಿರ್ಮೂಲನೆ ಮಾಡಲು ಪಂಜಾಬ್ ಪೊಲೀಸರು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಕೂಡಾ ಡಿಜಿಪಿ ಹೇಳಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಗೃಹ ಸಚಿವಾಲಯ ಲಖ್ಬೀರ್ ಲಾಂಡಾನನ್ನು ಭಯೋತ್ಪಾದಕ ಎಂದು ಘೋಷಿಸಿದೆ. 33 ವರ್ಷದ ಲಖ್ಬೀರ್ ಲಾಂಡಾ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ಗೆ (ಬಿಕೆಐ) ಸೇರಿದ್ದು, 2021ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿಯ ಮೇಲೆ ರಾಕೆಟ್ ದಾಳಿಯ ಯೋಜನೆಯಲ್ಲಿ ಭಾಗಿಯಾಗಿದ್ದನು.

ಡಿಸೆಂಬರ್ 2022ರಲ್ಲಿ ತರ್ನ್ ತರನ್‌ನಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆಯಲ್ಲಿ ಆರ್‌ಪಿಜಿ ದಾಳಿಗೆ ಸಂಬಂಧಿಸಿದಂತೆ ಲಖ್ಬೀರ್ ಲಾಂಡಾ ಹೆಸರು ಕೂಡಾ ಕೇಳಿಬಂದಿತ್ತು. ಭಯೋತ್ಪಾದಕ ಪಂಜಾಬ್‌ಗೆ ಸೇರಿದವನಾದರೂ ಕಳೆದ ಕೆಲವು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದಾನೆ. ಭಾರತದ ವಿರುದ್ಧ ಷಡ್ಯಂತ್ರಗಳನ್ನು ರೂಪಿಸುವಲ್ಲಿ ತೊಡಗಿದ್ದಾನೆ ಎಂಬ ಆರೋಪವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...