ಉತ್ತರಾಖಂಡ | ಖಾಸಗಿ ಹೆಲಿಕಾಪ್ಟರ್ ಪತನ; ಐವರು ಸಾವು

Date:

ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್‌ ಪತನವಾಗಿ ಐವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮೂಲಗಳ ಪ್ರಕಾರ 7 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಪತನವಾದ ನಂತರ ಸ್ಥಳೀಯ ನಿವಾಸಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಗಂಗನಾನಿ ಬಳಿ ಹೆಲಿಕಾಪ್ಟರ್ ಪತನವಾಗಿರುವುದಾಗಿ ಗರ್‌ವಾಲ್‌ ವಿಭಾಗೀಯ ಆಯುಕ್ತ ವಿಜಯ್‌ ಶಂಕರ್‌ ಪಾಂಡೆ ದೃಢೀಕರಿಸಿದ್ದಾರೆ. ಸ್ಥಳೀಯ ಪೊಲೀಸರು, ವಿಪತ್ತು ನಿರ್ವಹಣ ತಂಡ, ಆಂಬ್ಯುಲೆನ್ಸ್‌ ಮುಂತಾದ ತಂಡಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...