ಪಂಜಾಬ್ | ಭೀಕರ ಬಸ್ ಅಪಘಾತ; ಐವರ ದಾರುಣ ಸಾವು

Date:

ಖಾಸಗಿ ಬಸ್ ಒಂದು ಕಮರಿಗೆ ಬಿದ್ದು ಮಹಿಳೆ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ 22ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫರೀದ್‌ಕೋಟ್- ಕೋಟಕ್‌ಪುರ ರಸ್ತೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ 36 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮುಕ್ತಸರ್‌ನಿಂದ ಅಮೃತಸರ ದಾರಿಯಲ್ಲಿ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು ಬಳಿಕ ಸುಮಾರು 10 ಅಡಿ ಎತ್ತರದ ಸೇತುವೆಯಿಂದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಫರೀದ್‌ಕೋಟ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಜ್ಞಾ ಜೈನ್ ತಿಳಿಸಿದ್ದಾರೆ.

ಮೃತರಲ್ಲಿ ನಾಲ್ವರು ಮುಕ್ತ್‌ಸರ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. 26 ಪ್ರಯಾಣಿಕರನ್ನು ಫರೀದ್‌ಕೋಟ್‌ನ ಗುರು ಗೋವಿಂದ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನು ಗಾಯಾಳುಗಳಲ್ಲಿ ಇಬ್ಬರನ್ನು ಅಮೃತಸರದ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಒಬ್ಬರು ಪ್ರಯಾಣಿಕರು ಒಂದು ಕೈ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಂಜಾಬ್ ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...