ದೇಶವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿದೆ ಎನ್ನುವುದೇ ಒಂದು ದೊಡ್ಡ ಸುಳ್ಳು: ಪ್ರಿಯಾಂಕಾ ಗಾಂಧಿ

Date:

ದೇಶವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿದೆ ಎನ್ನುವುದೇ ಒಂದು ದೊಡ್ಡ ಸುಳ್ಳು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಹಾಗೂ ಮೋದಿ ಗ್ಯಾರಂಟಿ ಎನ್ನುವುದು ಬರಿ ಸುಳ್ಳುಗಳಾಗಿವೆ. ನಿರುದ್ಯೋಗ ಹಾಗೂ ಹಣದುಬ್ಬರ ದೇಶದ ನಿಜವಾದ ಸಮಸ್ಯೆಗಳಾಗಿದ್ದು, ಇವುಗಳಿಗೆ ಬಿಜೆಪಿ ಸರ್ಕಾರದ ಬಳಿ ಪರಿಹಾರವಿಲ್ಲ ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿಡಿಯೋದಲ್ಲಿ ಇಸ್ರೇಲ್‌ನಲ್ಲಿ ಕೆಲಸಕ್ಕಾಗಿ ಉತ್ತರ ಪ್ರದೇಶ ಹಾಗೂ ಹರ್ಯಾಣದ ಜನರು ಸರದಿಯಲ್ಲಿ ನಿಂತಿರುವುದನ್ನು ತೋರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾದರೂ ಯುದ್ಧದ ಸನ್ನಿವೇಶ ನಿರ್ಮಾಣವಾದರೆ ನಾವು ಮೊದಲು ನಮ್ಮ ನಾಗರಿಕರನ್ನು ನಮ್ಮ ದೇಶಕ್ಕೆ ವಾಪಸ್‌ ಕರೆಸಿಕೊಳ್ಳುತ್ತೇವೆ. ಆದರೆ ಇಂದು ಭೀಕರ ನಿರುದ್ಯೋಗ ಪರಿಸ್ಥಿತಿಯಿಂದ ಯುದ್ಧಪೀಡಿತ ಇಸ್ರೇಲ್‌ಗೆ ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಸಾವಿರಾರು ಯುವಕರನ್ನು ತಡೆಯಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದಿರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಐದು ಟ್ರಿಲಿಯನ್ ಡಾಲರ್, ವರ್ಷಕ್ಕೆ 2 ಕೋಟಿ ಉದ್ಯೋಗ ಹಾಗೂ ಮೋದಿ ಗ್ಯಾರಂಟಿಗಳು ಎಂದು ಹೇಳಿರುವುದು ಕೇವಲ ಸುಳ್ಳುಗಳಾಗಿವೆ” ಎಂದು ಪ್ರಿಯಾಂಕಾ ಹೇಳಿದರು.

“ನಮ್ಮ ಯುವಕರು ನಮ್ಮದೇ ಸ್ವಂತ ದೇಶದಲ್ಲಿ ಉದ್ಯೋಗ ಏಕೆ ಪಡೆಯುತ್ತಿಲ್ಲ. ಈ ಯುವಕರು ಕಳೆದ ಎರಡು ದಿನಗಳಿಂದ ಭಯಾನಕ ಯುದ್ಧ ನಡೆಯುತ್ತಿರುವ ಮಧ್ಯ ಏಷ್ಯಾಕ್ಕೆ ತೆರಳಲು ಸರದಿಯಲ್ಲಿ ನಿಂತಿದ್ದಾರೆ. ಅವರನ್ನು ಕಳಿಸಲು ನಾವು ಸಂತೋಷದಿಂದ ಸಿದ್ಧರಾಗಿದ್ದೇವೆ. ಅವರು ನಮ್ಮ ದೇಶದ ಮಕ್ಕಳಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದರಲ್ಲಿ ಸರ್ಕಾರದ ಪಾತ್ರವೇನು? ಯಾವ ಆಧಾರದ ಮೇಲೆ ಯುದ್ಧ ಪೀಡಿತ ಇಸ್ರೇಲ್‌ಗೆ ಪ್ರಾಣ ತ್ಯಾಗ ಮಾಡಲು ಭಾರತೀಯ ಯುವಕರನ್ನು ಸರ್ಕಾರ ಕಳಿಸುತ್ತಿದೆ? ನಮ್ಮ ದೇಶದ ಆಸ್ತಿಯಾಗಿರುವ ಅವರ ಜೀವನ ರಕ್ಷಿಸುವ ಜವಾಬ್ದಾರಿ ಯಾರು ತೆಗೆದುಕೊಳ್ಳುತ್ತಾರೆ? ಓ ದೇವರೆ ಯಾರಿಗಾದರೂ ಏನಾದರೂ ಅನಾಹುತವಾದರೆ ಯಾರು ಹೊಣೆ ಹೊರುತ್ತಾರೆ?” ಎಂದು ಪ್ರಿಯಾಂಕ ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...