ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ಉಪವಾಸ ಸತ್ಯಾಗ್ರಹ ಬೆಂಬಲಿಸಿ 50 ಹಿರಿಯ ವೈದ್ಯರು ರಾಜೀನಾಮೆ

Date:

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರಿಗೆ ಬೆಂಬಲ ಸೂಚಿಸಿ ಸುಮಾರು 50 ಹಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ ನಡೆದಿದೆ. ಈ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರುಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಅದೇ ಆಸ್ಪತ್ರೆಯ ಸುಮಾರು 50 ಹಿರಿಯ ವೈದ್ಯರು ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಬೆಳಿಗ್ಗೆ ನಡೆದ ಸರ್ಕಾರಿ ಆಸ್ಪತ್ರೆಯ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

“ಇಂದಿನ ಸಭೆಯಲ್ಲಿ ಇದನ್ನು ನಿರ್ಧರಿಸಲಾಗಿದೆ. ನಮ್ಮ ಆಸ್ಪತ್ರೆಯ ಎಲ್ಲಾ 50 ಹಿರಿಯ ವೈದ್ಯರು ತಮ್ಮ ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ಯುವ ವೈದ್ಯರಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವು ರಾಜೀನಾಮೆ ನೀಡುತ್ತಿದ್ದೇವೆ” ಎಂದು ಹಿರಿಯ ವೈದ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ಸಹ ಆರ್‌ಜಿ ಕರ್ ಆಸ್ಪತ್ರೆಯಲ್ಲಿನ ತಮ್ಮ ಸಹೋದ್ಯೋಗಿಗಳಂತೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲವಾರು ದಿನಗಳಿಂದ ತಮ್ಮ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದ ವೈದ್ಯರುಗಳು ಕಳೆದ ನಾಲ್ಕು ದಿನಗಳಿಂದ ಆಮರಣ ಉಪವಾಸ ನಡೆಸುತ್ತಿದ್ದಾರೆ. ಆದರೆ ಅಧಿಕಾರಿಗಳಿಂದ ತಮಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವೈದ್ಯರುಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...