ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

Date:

ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ.

ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು ಗುರುತಿಸಲಾಗಿದೆ. ಆತ, ವಿವಿಧ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ ಮೂಲಕ ಮುಸ್ಲಿಂ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ವಂಚಿಸಿದ್ದಾನೆ. ಆತನ ವಂಚನೆಗೆ ತುತ್ತಾದ ಎಲ್ಲ ಮುಸ್ಲಿಂ ಮಹಿಳೆಯರು ಶ್ರೀಮಂತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಓರ್ವ ಸಂತ್ರಸ್ತೆ ನ್ಯಾಯಾಂಗದಲ್ಲಿ ಅಧಿಕಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಆರೋಪಿಯ ವಂಚನೆಗಳ ಬಗ್ಗೆ ವಿವರಗಳನ್ನು ಹಂಚಿಕೊಂಡಿರುವ ಡಿಸಿಪಿ (ಅಪರಾಧ) ಎಸ್‌ಕೆ ಸೈನ್, “ಮುಕೀಮ್ ಬಗ್ಗೆ ನಮಗೆ ರಹಸ್ಯ ಮಾಹಿತಿ ಸಿಕ್ಕಿದೆ. ಆತ ಮದುವೆಯ ನೆಪದಲ್ಲಿ ಹಲವಾರು ಮಹಿಳೆಯರನ್ನು ವಂಚಿಸಿದ್ದಾನೆ. ಆತನ ವಂಚನೆಗಳ ಬಗ್ಗೆ ಹಲವು ರಾಜ್ಯಗಳ ಪೊಲೀಸರಿಂದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ನೆಲೆಸಿದ್ದ ಹಲವಾರು ಗೌಪ್ಯ ಸ್ಥಳಗಳ ಮೇಲೆ ಪೊಲೀಸ್‌ ತಂಡಗಳು ದಾಳಿ ನಡೆಸಿವೆ. ಆತ ನಿರಂತರವಾಗಿ ತನ್ನ ವಾಸ್ತವ್ಯವನ್ನು ಬದಲಿಸುತ್ತಿದ್ದನು. ಆರೋಪಿ ಮುಕೀಮ್ ಗುಜರಾತ್‌ನಿಂದ ದೆಹಲಿಗೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದರಿಂದಾಗಿ, ಆತನನ್ನು ನಿಜಾಮುದ್ದೀನ್ ರೈಲು ನಿಲ್ದಾಣದಲ್ಲಿ ಬಂಧಿಸಲು ಸಾಧ್ಯವಾಯಿತು” ಎಂದು ವಿವರಿಸಿದ್ದಾರೆ.

“ಸರ್ಕಾರಿ ಅಧಿಕಾರಿಯಂತೆ ನಟಿಸುವ ಮೂಲಕ ಮುಸ್ಲಿಂ ಸಮುದಾಯದ ಅವಿವಾಹಿತೆಯರು, ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದನು. ಮಹಿಳೆಯರೊಂದಿಗೆ ನಾಚೂಕಿನಿಂದ ಮಾತನಾಡುವ ಮೂಲಕ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುತ್ತಿದ್ದನು. ಬಳಿಕ, ಮದುವೆಯಾಗುವುದಾಗಿ ನಂಬಿಸಿ ಹಣ, ಒಡವೆಗಳನ್ನು ದೋಚುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...