ದೇಶದ 91 ಜಿಲ್ಲೆಗಳಲ್ಲಿ ಬರಗಾಲದ ಅಪಾಯ, 51 ಜಿಲ್ಲೆಗಳು ಪ್ರವಾಹ ಪೀಡಿತ

Date:

ದೇಶದ ಸುಮಾರು ಶೇಕಡ 60ಕ್ಕಿಂತ ಅಧಿಕ ಜಿಲ್ಲೆಗಳು ಪ್ರವಾಹ ಪೀಡಿತ ಮತ್ತು ಬರಗಾಲದ ಅಪಾಯದಲ್ಲಿದೆ. ಈ ಎರಡೂ ನೈಸರ್ಗಿಕ ಅಪಾಯಗಳು, ತುರ್ತು ಕ್ರಮಗಳ ಅಗತ್ಯವಿರುವ ಜಿಲ್ಲೆಗಳ ಬಗ್ಗೆ ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಹೊಸ ಮೌಲ್ಯಮಾಪನ ವರದಿಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.

ಈ ವರದಿಯನ್ನು ಶುಕ್ರವಾರ ಗುವಾಹಟಿಯಲ್ಲಿ ಬಿಡುಗಡೆ ಮಾಡಲಾಗಿದೆ. 20 ರಾಜ್ಯಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳ ಸಹಭಾಗಿತ್ವದಲ್ಲಿ ಈ ಡೇಟಾ ತಯಾರಿಸಲಾಗಿದೆ. ಹೆಚ್ಚುವರಿಯಾಗಿ, 1970 ಮತ್ತು 2019ರ ನಡುವಿನ 50 ವರ್ಷಗಳ ಹವಾಮಾನ ಮತ್ತು ಕೃಷಿ ಡೇಟಾವನ್ನು ಮೌಲ್ಯಮಾಪನಕ್ಕಾಗಿ ಬಳಸಲಾಗಿದೆ.

ಇದನ್ನು ಓದಿದ್ದೀರಾ? ಪ್ರವಾಹ, ಬರಗಾಲಕ್ಕೆ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಭಿವೃದ್ಧಿ ಮತ್ತು ಸಹಕಾರ ಸ್ವಿಸ್ ಏಜೆನ್ಸಿ ಬೆಂಬಲದಲ್ಲಿ ಐಐಟಿ ಗುವಾಹಟಿ, ಐಐಟಿ ಮಂಡಿ ಮತ್ತು ಬೆಂಗಳೂರಿನ ವಿಜ್ಞಾನ, ತಂತ್ರಜ್ಞಾನ ಮತ್ತು ನೀತಿ ಅಧ್ಯಯನ ಕೇಂದ್ರದ ಸಂಶೋಧಕರು ಈ ವರದಿಯನ್ನು ಸಿದ್ಧಪಡಿಸಿದ್ದಾರೆ.

ವರದಿ ಪ್ರಕಾರ ದೇಶದಲ್ಲಿ ಸುಮಾರು 91 ಜಿಲ್ಲೆಗಳು ‘ಅತೀ ಅಧಿಕ’ ಬರಗಾಲದ ಅಪಾಯದಲ್ಲಿದೆ. 188 ಜಿಲ್ಲೆಗಳು ‘ಅಧಿಕ’ ಬರಗಾಲದ ಅಪಾಯದಲ್ಲಿದೆ. ಬರಗಾಲದ ಅಪಾಯದಲ್ಲಿರುವ ಜಿಲ್ಲೆಗಳ ಪೈಕಿ ಶೇಕಡ 85ರಷ್ಟು ಜಿಲ್ಲೆಗಳು ಬಿಹಾರ, ಅಸ್ಸಾಂ, ಜಾರ್ಖಂಡ್, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ಛತ್ತೀಸ್‌ಗಢ, ಕೇರಳ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ಹರಿಯಾಣದಲ್ಲಿವೆ.

ಇನ್ನು ಇದೇ ವರದಿ ಪ್ರಕಾರ ಭಾರತದಲ್ಲಿರುವ ಸುಮಾರು 51ರಷ್ಟು ಜಿಲ್ಲೆಗಳು ‘ಅತೀ ಹೆಚ್ಚು’ ಪ್ರವಾಹ ಅಪಾಯದಲ್ಲಿದೆ. 118 ಜಿಲ್ಲೆಗಳು ‘ಹೆಚ್ಚು’ ಅಪಾಯದಲ್ಲಿದೆ. ಈ ಪೈಕಿ ಅಧಿಕ ಪ್ರವಾಹ ಪೀಡಿತ ಜಿಲ್ಲೆಗಳು ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಗುಜರಾತ್, ಒಡಿಶಾ ಮತ್ತು ಜಮ್ಮು ಕಾಶ್ಮೀರದಲ್ಲಿದೆ.

ಇದನ್ನು ಓದಿದ್ದೀರಾ? ಬರಗಾಲವನ್ನೂ ಸರಿಸಿ ಸುರಿದ ಮುಂಗಾರು ಪೂರ್ವ ಮಳೆ, ಯಾರ ಅನುಕೂಲಕ್ಕಾಗಿ?

ಅಸ್ಸಾಂನ ಐದು ಮತ್ತು ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳು ಸೇರಿದಂತೆ ಪಾಟ್ನಾ (ಬಿಹಾರ), ಅಲಪ್ಪುಳ (ಕೇರಳ), ಮತ್ತು ಕೇಂದ್ರಪಾರ (ಒಡಿಶಾ) ಸೇರಿ ಒಟ್ಟು 11 ಜಿಲ್ಲೆಗಳು ಪ್ರವಾಹ ಮತ್ತು ಅನಾವೃಷ್ಟಿ ಎರಡೂ ಕಾಡು ‘ಅತೀ ಅಧಿಕ’ ಅಪಾಯದಲ್ಲಿದೆ. ಇಲ್ಲಿ ತುರ್ತಾಗಿ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ವರದಿ ಸಲಹೆ ನೀಡಿದೆ.

ಉತ್ತರ, ಮಧ್ಯ ಕರ್ನಾಟಕದಲ್ಲಿ ಬರ ಅಪಾಯ

ಇನ್ನು ಉತ್ತರ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳು ಹೆಚ್ಚಿನ ಬರಗಾಲದ ಅಪಾಯವನ್ನು ಎದುರಿಸುತ್ತಿದ್ದು, ಕಳೆದ 20 ವರ್ಷಗಳಿಂದ ತೇವಾಂಶ ಪ್ರಮಾಣ ಕಡಿಮೆಯಾಗುತ್ತಲೇ ಸಾಗುತ್ತಿದೆ. ಒಟ್ಟು 698 ಜಿಲ್ಲೆಗಳಿಗೆ ಮೌಲ್ಯಮಾಪನ ಮಾಡಲಾಗಿದ್ದು, ಅದರಲ್ಲಿ 459 ಅಪಾಯದಲ್ಲಿದೆ ಎಂದು ಕಂಡುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...