150 ಕಿ.ಮೀ ಈಜಿ ದಾಖಲೆ ಬರೆದ 52 ವರ್ಷದ ಮಹಿಳೆ; ಸಿಎಂ ಶ್ಲಾಘನೆ!

Date:

ಮಹಿಳೆಯೊಬ್ಬರು ತಮ್ಮ 52ನೇ ವಯಸ್ಸಿನಲ್ಲಿಯೂ ಸಮುದ್ರದಲ್ಲಿ 150 ಕಿ.ಮೀ ಈಜುವ ಮೂಲಕ ಸಾಧನೆ ಮಾಡಿದ್ದಾರೆ. ಅವರ ಸಾಧನೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶ್ಲಾಘಿಸಿದ್ದಾರೆ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಂಧ್ರದ ಕಾಡಿನಾಡ ಜಿಲ್ಲೆಯ ಗೋಲಿ ಶಾಮಲಾ ಎಂಬವರು ಬಂಗಾಳ ಕೊಲ್ಲಿಯಲ್ಲಿ 150 ಕಿ.ಮೀ ಈಜಿದ್ದಾರೆ. ಡಿಸೆಂಬರ್ 28ರಂದು ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಿಂದ ಈಜಿನ ಸ್ಪರ್ಧೆ ಆರಂಭಿಸಿದ ಶಾಮಲಾ ಅವರು ಜನವರಿ 4ರಂದು ಕಾಕಿನಾಡ ಬೀಚ್‌ಅನ್ನು ತಲುಪಿದ್ದಾರೆ. ಕಾಕಿನಾಡ ತಲುಪಿದ ಶಾಮಲಾ ಅವರನ್ನು ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಶಾಮಲಾ ಅವರ ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, “52ನೇ ವಯಸ್ಸಿನಲ್ಲಿ, ಗೋಲಿ ಶ್ಯಾಮಲಾ ಅವರು ವಿಶಾಖಪಟ್ಟಣಂನಿಂದ ಕಾಕಿನಾಡಕ್ಕೆ 150 ಕಿ.ಮೀ ಈಜಿದ್ದಾರೆ. ಅವರ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪವೇ ಒಂದು ಕಥೆಯಾಗಿದೆ. ಆಂಧ್ರ ಪ್ರದೇಶದ ಈ ಮಗಳು ತನ್ನ ಆರು ದಿನಗಳ ಪ್ರಯಾಣದಲ್ಲಿ ಹಲವಾರು ಸವಾಲುಗಳನ್ನು ಎದುರಿಸಿ ಜಯಗಳಿಸಿದ್ದಾರೆ. ಅವರ ಪ್ರಯಾಣವು ಮಾನವ ಚೈತನ್ಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...