ಅಂತೂ-ಇಂತೂ ಪಿಯುಸಿ ‘ಪಾಸು’ ಮಾಡಿದ ಮಾಜಿ ಶಾಸಕರು

Date:

ಉತ್ತರ ಪ್ರದೇಶದ ಇಬ್ಬರು ಮಾಜಿ ಶಾಸಕರು ತಮ್ಮ 55ನೇ ವಯಸ್ಸಿನಲ್ಲಿ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ (ಇಂಟರ್ ಮಿಡೀಯೆಟ್) ಉತ್ತೀರ್ಣರಾಗಿದ್ದಾರೆ.

ಏ.25ರಂದು ಉತ್ತರ ಪ್ರದೇಶದ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಈ ವರ್ಷದ ಪರೀಕ್ಷೆ ಎದುರಿಸಿದ್ದ ಬಿಜೆಪಿ ಮಾಜಿ ಶಾಸಕ ರಾಜೇಶ್ ಮಿಶ್ರಾ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪ್ರಭು ದಯಾಳ್ ತೇರ್ಗಡೆಯಾಗಿದ್ದಾರೆ.

ರಾಜೇಶ್ ಮಿಶ್ರಾ ಅವರು ದ್ವಿತೀಯ ಪಿಯು ಪರೀಕ್ಷೆಯಲ್ಲಿ 500 ಅಂಕಗಳಿಗೆ 263 ಗಳಿಸಿದ್ದಾರೆ. ಹಿಂದಿ ವಿಷಯದಲ್ಲಿ 57 ಅಂಕ ಗಳಿಸಿದ್ದು, ಸಮಾಜಶಾಸ್ತ್ರದಲ್ಲಿ 89 ಅಂಕ ಹಾಗೂ ಚಿತ್ರಕಲೆಯಲ್ಲಿ 36 ಅಂಕ ಗಳಿಸಿದ್ದಾರೆ. ಅವರು ಕಳೆದ ವಿಧಾನಸಭೆಗೆ (2017ರಿಂದ 2022) ಬಿತ್ರಿ ಚೈನಪುರ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವು ತೇರ್ಗಡೆಯಾದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜೇಶ್ ಮಿಶ್ರಾ, “ಫಲಿತಾಂಶ ನನಗೆ ತೃಪ್ತಿ ನೀಡಿಲ್ಲ. ನಾನು ಶಾಸಕನಾಗಿದ್ದಾಗ, ಆರ್ಥಿಕವಾಗಿ ದುರ್ಬಲ ವರ್ಗದ ಜನರು ಉತ್ತಮ ವಕೀಲರ ಸೇವೆಯನ್ನು ಪಡೆಯಲು ಹೆಚ್ಚು ಕಷ್ಟ ಅನುಭವಿಸುತ್ತಿದ್ದುದ್ದನ್ನು ಗಮನಿಸಿದ್ದೆ. ಹೀಗಾಗಿ, ಕಾನೂನು ವಿಷಯ ಅಧ್ಯಯನ ಮಾಡಬೇಕೆಂದು ಅಂದೇ ನಿರ್ಧರಿಸಿದ್ದೆ. ಮುಂದೆ ಜನರಿಗೆ ಸಹಾಯ ಮಾಡುತ್ತೇನೆ,” ಎಂದು ಹೇಳಿದ್ದಾರೆ.

ಪ್ರಭು ದಯಾಳ್ ವಾಲ್ಮೀಕಿ ಎನ್ನುವ ಸಮಾಜವಾದಿ ಪಕ್ಷದ ಮಾಜಿ ಶಾಸಕ ಕೂಡ ತಮ್ಮ 59ನೇ ವಯಸ್ಸಿನಲ್ಲಿ ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ಪಾಸಾಗಿದ್ದಾರೆ. ಪ್ರಭು ದಯಾಳ್ ಅವರು ಅಖಿಲೇಶ್ ಯಾದವ್‌ ಸರ್ಕಾರದಲ್ಲಿ ರಾಜ್ಯ ಸಚಿವ ಆಗಿದ್ದರು. ಹಸ್ತಿನಾಪುರದಿಂದ ಅವರು ಎರಡು ಬಾರಿ ಶಾಸಕರಾಗಿದ್ದರು.

ಈ ಸುದ್ದಿ ಓದಿದ್ದೀರಾ?: ʼಬಿಬಿಸಿʼ ಹೆಸರಿನಲ್ಲಿ ಬಿಜೆಪಿ ಪರ ನಕಲಿ ಸಮೀಕ್ಷೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...