6 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದ ಸೇನೆ: ಬಿಜೆಪಿ ವಿರುದ್ಧ ಹಿಮಾಚಲ ಪ್ರದೇಶ ಸಿಎಂ ಆರೋಪ

Date:

ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು ಶಾಸಕರನ್ನು ಹರಿಯಾಣಕ್ಕೆ ಕರೆದೊಯ್ಯಲಾಗಿದೆ ಎಂದು ಹಿಮಾಚಲ ಪದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಆರೋಪಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಸುಖು ಅವರು ಈ ಹೇಳಿಕೆ ನೀಡಿದ್ದಾರೆ.

ಫೆ.29ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದ್ದು, ಈ ಕಾರಣದಿಂದಲೇ ಆರು ಕಾಂಗ್ರೆಸ್ ಹಾಗೂ ಮೂವರು ಪಕ್ಷೇತರ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. 68 ಸದಸ್ಯಬಲದ ಹಿಮಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ 40 ಶಾಸಕರಿದ್ದು, ಇಲ್ಲಿನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸುಲಭವಾಗಿ ಗೆಲುವು ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಆಡಳಿತವಿರುವ ಹರಿಯಾಣ ರಾಜ್ಯಕ್ಕೆ ಕರೆದೊಯ್ಯಲಾಗಿದ್ದು, ಕಮಲ ಪಕ್ಷವು ಅವಿಶ್ವಾಸ ಮತ ಮಂಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ನಂಬಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ 25 ಶಾಸಕರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

“ರಾಜ್ಯಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಆದರೆ ಬಿಜೆಪಿ ನಾಯಕರು ಮತ ಎಣಿಕೆ ಅಧಿಕಾರಿಗಳನ್ನು ಬೆದರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಅವರು ಬಹಳ ಸಮಯದಿಂದ ಮತದಾನವನ್ನು ನಿಲ್ಲಿಸಿದ್ದಾರೆ. ಸಂಯಮದಿಂದ ವರ್ತಿಸಿ ಜನರ ಮೇಲೆ ಒತ್ತಡ ತರಬೇಡಿ ಎಂದು ನಾನು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ” ಎಂದು ಎಕ್ಸ್‌ನಲ್ಲಿ ಸಿಎಂ ಸುಖು ತಿಳಿಸಿದ್ದಾರೆ.

“ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು ಶಾಸಕರನ್ನು ಹರಿಯಾಣಕ್ಕೆ ಕರೆದೊಯ್ಯಲಾಗಿದೆ. ಶಾಸಕರ ಕುಟುಂಬದವರು ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಶಾಸಕರು ಅವರನ್ನು ಸಂಪರ್ಕಿಸಬೇಕು. ಆತಂಕಪಡುವ ಅಗತ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ವಿಪಕ್ಷ ಹಾಗೂ ಸರ್ಕಾರವಿದೆ. ಆದರೆ ವಿಪಕ್ಷದಿಂದ ಈ ರೀತಿ ನಡೆಯುವ ಗೂಂಡಾಗಿರಿಯನ್ನು ಹಿಮಾಚಲ ಪ್ರದೇಶದ ಜನತೆ ಒಪ್ಪುವುದಿಲ್ಲ” ಎಂದು ಸುಖ್ವಿಂದರ್‌ ಸಿಂಗ್‌ ಸುಖು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...