ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೀಕರ ಭೂಕುಸಿತ: ಕನಿಷ್ಠ ಆರು ಮಂದಿ ಸಾವು

Date:

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಮಿರಿಕ್‌ನಲ್ಲಿ ಭೀಕರ ಭೂಕುಸಿತದಿಂದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಮಳೆಯಿಂದ ಮಿರಿಕ್ ಮತ್ತು ಕುರ್ಸಿಯಾಂಗ್ ನಗರಗಳನ್ನು ಸಂಪರ್ಕಿಸುತ್ತಿದ್ದ ದುಡಿಯಾ ಲೋಹದ ಸೇತುವೆ ಸಂಪೂರ್ಣವಾಗಿ ಕುಸಿದಿದೆ.

ಕುರ್ಸಿಯಾಂಗ್ ಬಳಿಯ ರಾಷ್ಟ್ರೀಯ ಹೆದ್ದಾರಿ 110 ರಲ್ಲಿರುವ ಹುಸೇನ್ ಖೋಲಾದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಗ್ರಾಮೀಣ ರಸ್ತೆಗಳಿಂದ ಹಿಡಿದು ರಾಷ್ಟ್ರೀಯ ಹೆದ್ದಾರಿಗಳವರೆಗೆ ಕೆಸರುಮಯವಾಗಿರುವ ದೃಶ್ಯಗಳು ಭೀಕರ ಸ್ಥಿತಿಯನ್ನು ಬಿಂಬಿಸಿವೆ.

ಭಾರತೀಯ ಹವಾಮಾನ ಇಲಾಖೆ ಡಾರ್ಜಿಲಿಂಗ್, ಕಾಲಿಂಪಾಂಗ್, ಕೂಚ್ ಬೆಹಾರ್, ಜಲ್ಪಾಯಿಗುರಿ ಮತ್ತು ಅಲಿಪುರ್ದ್ವಾರ್ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ಘೋಷಿಸಿದೆ. ಜಲ್ಪೈಗುರಿ ಜಿಲ್ಲೆಯ ಮಾಲ್‌ಬಜಾರ್ ಪ್ರದೇಶದಲ್ಲಿ ಭಾರೀ ಮಳೆಯಿಂದ ಅನೇಕ ಮನೆಗಳು ನೀರಿನಲ್ಲಿ ಮುಳುಗಿವೆ. ತೀಸ್ಟಾ, ಮಾಲ್ ಸೇರಿದಂತೆ ಹಲವಾರು ನದಿಗಳು ಅಪಾಯದ ಮಟ್ಟದ ಮೇಲೆ ಹರಿಯುತ್ತಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಅಲಿಪುರ್ದ್ವಾರ್‌ನಂತಹ ಜಿಲ್ಲೆಗಳಲ್ಲೂ ಸೋಮವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಜಲ್ಪಾಯಿಗುರಿಯ ಮಾಲ್‌ಬಜಾರ್‌ನಲ್ಲಿ ದೊಡ್ಡ ಪ್ರದೇಶವೇ ಜಲಾವೃತವಾಗಿದೆ.

ತೀಸ್ತಾ, ಮಾಲ್ ಮತ್ತು ಇತರ ಪ್ರದೇಶದ ನದಿಗಳ ನೀರಿನ ಮಟ್ಟವು ಅಪಾಯಕಾರಿ ಮಟ್ಟವನ್ನು ಮೀರಿದ್ದು, ಪ್ರವಾಹದಂತಹ ಸ್ಥಿತಿಯನ್ನು ಸೃಷ್ಟಿಸಿದೆ. ಈ ಜಿಲ್ಲೆಗಳಲ್ಲಿ ಸೋಮವಾರ ಬೆಳಿಗ್ಗೆವರೆಗೆ ಬಹುತೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಪಶ್ಚಿಮ ಜಾರ್ಖಂಡ್, ದಕ್ಷಿಣ ಬಿಹಾರ, ಆಗ್ನೇಯ ಉತ್ತರ ಪ್ರದೇಶ ಮತ್ತು ಉತ್ತರ ಛತ್ತೀಸ್‌ಗಢದ ಜೊತೆಗಿರುವ ಕಡಿಮೆ ಒತ್ತಡದ ವಲಯವು ಉತ್ತರ-ಈಶಾನ್ಯಕ್ಕೆ ಬಿಹಾರದ ಕಡೆಗೆ ಸಾಗಲಿದ್ದು, ಶನಿವಾರ ಸಂಜೆಯ ವೇಳೆಗೆ ಕಡಿಮೆ ಒತ್ತಡದ ವಲಯವಾಗಿ ದುರ್ಬಲಗೊಳ್ಳಲಿದೆ ಎಂದು ಐಎಂಡಿ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ.

ದಕ್ಷಿಣ ಬಂಗಾಳದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಮುರ್ಷಿದಾಬಾದ್, ಬೀರ್ಭೂಮ್ ಮತ್ತು ನದಿಯಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಶನಿವಾರ ಬೆಳಿಗ್ಗೆ 8:30 ರವರೆಗೆ ಪಶ್ಚಿಮ ಬಂಗಾಳದ ಹಲವೆಡೆ ಮಳೆಯಾಗಿದ್ದು, ಬಂಕುರಾದಲ್ಲಿ ಅತಿ ಹೆಚ್ಚಾಗಿ 65.8 ಮಿಮೀ ಮಳೆ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...