ಆಂಧ್ರ, ತೆಲಂಗಾಣದಲ್ಲಿ ರಸ್ತೆ ಅಪಘಾತ: 8 ಸಾವು

Date:

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟು, 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಆಂಧ್ರದ ಕೃಷ್ಣ ಜಿಲ್ಲೆಯ ಸೀತನಪಲ್ಲಿಯಲ್ಲಿ ಟ್ರಕ್‌ವೊಂದು ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಪೊಲೀಸ್‌ ವರದಿಗಳಂತೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಾಕ್ಟರ್‌ಅನ್ನು ಟ್ರಕರ್‌ ಓವರ್‌ಟೇಕ್‌ ಮಾಡಲು ಹೋದಾಗ ಅಪಘಾತ ಸಂಭವಿಸಿದೆ.

ಪೊಲೀಸರು ಹಾಗೂ ಸ್ಥಳೀಯರು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ 2 ಕಿ.ಮೀ ದೂರದವರೆಗೂ ಸಂಚಾರದಟ್ಟಣೆ ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಇನ್ನೊಂದು ಘಟನೆಯಲ್ಲಿ ತೆಲಂಗಾಣದ ಮೆಹಬೂಬಾಬಾದ್‌ ಜಿಲ್ಲೆಯ ಗುಡೂರು ಕ್ರಾಸ್‌ ರಸ್ತೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.

ಬಿದಿರಿನ ಕಡ್ಡಿಗಳನ್ನು ಹೊತ್ತ ಟ್ರಕ್‌ ಮೆಹಬೂಬಾಬಾದ್‌ನಿಂದ ನರಸಮ್‌ಪೇಟೆಗೆ ತೆರಳುತ್ತಿದ್ದಾಗ ವಾಹನದ ನಿಯಂತ್ರಣ ಕಳೆದುಕೊಂಡ ಚಾಲಕ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾರ್ವಜನಿಕರ ಮೇಲೆ ವಾಹನ ಹರಿಸಿದ ಪರಿಣಾಮ ಅಪಘಾತ ಸಂಭವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...